More

    ದೆಹಲಿಯ ಹಲವೆಡೆ ಮೋದಿ ವಿರೋಧಿ ಪೋಸ್ಟರ್: 44 ಪ್ರಕರಣ ದಾಖಲು, ನಾಲ್ವರ ಬಂಧನ​, ಎಎಪಿ ಆಕ್ರೋಶ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವೆಡೆ ಪ್ರಧಾನಿ ಮೋದಿ ವಿರೋಧಿ ಪೋಸ್ಟರ್​ಗಳು ರಾರಾಜಿಸುತ್ತಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಒಟ್ಟು 44 ಪ್ರಕರಣಗಳನ್ನು ದಾಖಲಿಸಿ, ನಾಲ್ಕು ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಲ್ವರಲ್ಲಿ ಇಬ್ಬರು ತಮ್ಮದೇ ಮುದ್ರಣಾಲಯವನ್ನು ಹೊಂದಿರುವುದಾಗಿ ತಿಳಿದುಬಂದಿದೆ.

    ಮಂಗಳವಾರ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಪೊಲೀಸರು ದೆಹಲಿಯ ಹಲವು ಸ್ಥಳಗಳಿಂದ ಸುಮಾರು 2,000 ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದಾರೆ. ಈ ಪೋಸ್ಟರ್‌ಗಳಲ್ಲಿ ಹೆಚ್ಚಿನವು “ಮೋದಿ ಹಠಾವೋ, ದೇಶ್ ಬಚಾವೋ (ಮೋದಿಯನ್ನು ತೆಗೆದುಹಾಕಿ, ದೇಶವನ್ನು ಉಳಿಸಿ)” ಎಂಬ ಘೋಷಣೆಯನ್ನು ಬರೆಯಲಾಗಿತ್ತು.

    ಇದನ್ನೂ ಓದಿ: ಭೂಕಂಪದ ನಡುವೆಯೂ ಹೆರಿಗೆ ಮಾಡಿಸಿದ ವೈದ್ಯರು! ವಿಡಿಯೋ ವೈರಲ್…

    ಸಾರ್ವಜನಿಕ ಆಸ್ತಿಯನ್ನು ವಿರೂಪಗೊಳಿಸಿದ್ದಕ್ಕಾಗಿ ಮತ್ತು ಯಾವುದೇ ಪೋಸ್ಟರ್​ಗಳಲ್ಲಿ ಪ್ರಿಂಟಿಂಗ್ ಪ್ರೆಸ್ ಹೆಸರನ್ನು ಮುದ್ರಿಸಿರಬೇಕು ಎಂಬ ಕಾನೂನನ್ನು ಉಲ್ಲಂಘಿಸಿರುವ ಆರೋಪದ ಅಡಿಯಲ್ಲಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

    ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿಗೆ ತಲುಪಿಸಲಾಗುತ್ತಿದ್ದ ಸುಮಾರು 2,000 ಪೋಸ್ಟರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸೆಂಟ್ರಲ್ ದೆಹಲಿಯ ಐಪಿ ಎಸ್ಟೇಟ್ ಪ್ರದೇಶದಲ್ಲಿ ವ್ಯಾನ್ ಅನ್ನು ಅಡ್ಡಗಟ್ಟಿದ ಪೊಲೀಸರು ಪೋಸ್ಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಪೋಸ್ಟರ್‌ಗಳನ್ನು ಎಎಪಿ ಕೇಂದ್ರ ಕಚೇರಿಗೆ ತಲುಪಿಸುವಂತೆ ನಮಗೆ ಸೂಚಿಸಲಾಗಿತ್ತು ಎಂದು ವ್ಯಾನ್​ ಚಾಲಕ ಪೊಲೀಸರಿಗೆ ತಿಳಿಸಿದ್ದಾನೆ. ಅಲ್ಲದೆ, ಸೋಮವಾರವೂ ಇದೇ ರೀತಿಯ ಸರಕನ್ನು ತಲುಪಿಸಿರುವುದಾಗಿ ಹೇಳಿದ್ದಾನೆ.

    ಬಂಧಿತರ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ಗಳನ್ನು ಆಮ್ ಆದ್ಮಿ ಪಕ್ಷವು ಟ್ವೀಟ್‌ ಮೂಲಕ ಪ್ರಶ್ನಿಸಿದೆ ಮತ್ತು ಪೋಸ್ಟರ್‌ಗಳಲ್ಲಿ ಅಂಥದ್ದೇನು ಆಕ್ಷೇಪಾರ್ಹ ಇದೆ ಎಂದು ಕೇಳಿದೆ. ಇದು ಮೋದಿ ಸರ್ಕಾರದ ಸರ್ವಾಧಿಕಾರದ ಉತ್ತುಂಗವನ್ನು ತೋರಿಸುತ್ತದೆ ಎಂದು ಆರೋಪಿಸಿದೆ.

    ಇದನ್ನೂ ಓದಿ: ನೇಣುಗಂಬದ ಬದಲು ಪರ್ಯಾಯ ಏನಿದೆ?; ಅಧ್ಯಯನ ನಡೆಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

    “ಮೋದಿ ಹಠಾವೋ, ದೇಶ್ ಬಚಾವೋ” ಬರವಣಿಗೆಯುಳ್ಳ 50,000 ಪೋಸ್ಟರ್‌ಗಳನ್ನು ಮುದ್ರಿಸಲು ನಮಗೆ ಆದೇಶ ಬಂದಿದೆ ಎಂದು ಬಂಧಿತ ಪ್ರಿಂಟಿಂಗ್ ಪ್ರೆಸ್ ಮಾಲೀಕರು ದೆಹಲಿ ಪೊಲೀಸರಿಗೆ ತಿಳಿಸಿದ್ದಾರೆ. ಪೋಸ್ಟರ್‌ಗಳಲ್ಲಿ ಪ್ರಿಂಟಿಂಗ್ ಪ್ರೆಸ್‌ನ ಹೆಸರಿಲ್ಲದ ಕಾರಣ ಮಾಲೀಕರನ್ನು ಬಂಧಿಸಲಾಗಿದೆ. (ಏಜೆನ್ಸೀಸ್​)

    ಇನ್ಮುಂದೆ ಬಿಸಿಯೂಟದೊಂದಿಗೆ ಸಿಗಲಿದೆ ರಾಗಿ ಮಾಲ್ಟ್

    ದೂರು ನೀಡಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಪ್ರಕರಣ; ಕೊಡಿಗೆಹಳ್ಳಿ ಇನ್ಸ್​ಪೆಕ್ಟರ್ ಅಮಾನತು

    ರೋಗಿಯ ಹೊಟ್ಟೆಯೊಳಗೆ ಬಟ್ಟೆ ಬಿಟ್ಟ ವೈದ್ಯ! ಪರಿಸ್ಥಿತಿ ಗಂಭೀರ ಆಗುತ್ತಿದ್ದಂತೆಯೇ ಆಸ್ಪತ್ರೆಯಿಂದ ಹೊರ ಕಳಿಸಿದ್ರು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts