More

    ರಾಮನವಮಿ ಪಾನಕ-ಮಜ್ಜಿಗೆ ಸೇವಿಸಿ 45ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ತುಮಕೂರು: ರಾಮನವಮಿಯಂದು ಹಂಚಲಾದ ಮಜ್ಜಿಗೆ-ಪಾನಕ ಸೇವಿಸಿ 45ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ತುಮಕುರು ಜಿಲ್ಲೆ ಕುಣಿಗಲ್​ ತಾಲ್ಲೂಕಿನ ಮಂಗಳ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಕುಣಿಗಲ್​ ತಾಲ್ಲೂಕಿನ ಅಮೃತೂರು ಹೋಬಳಿಯಲ್ಲಿ ಕೊಡವತ್ತಿ ಗ್ರಾಮ ಸಮೀಪದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಬುಧವಾರ (ಏಪ್ರಿಲ್ 17) ರಾಮನವಮಿ ಪ್ರಯುಕ್ತ ಮಜ್ಜಿಗೆ, ಪಾನಕ ವಿತರಣೆ ಮಾಡಲಾಗಿತ್ತು. ಪಾನಕ-ಮಜ್ಜಿಗೆ ಸೇವಿಸಿದ ಕೆಲ ಹೊತ್ತಿನಲ್ಲಿ ವಾಂತಿ-ಭೇದಿ ಶುರುವಾಗಿದೆ. ಕೂಡಲೇ ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ದೋಷಪೂರಿತ ಪಾನಕ-ಮಜ್ಜಿಗೆ ಸೇವನೆ ಆರೋಗ್ಯ ಹದಗೆಡಲು ಮುಖ್ಯ ಕಾರಣ ಎಂದು ತಿಳಿದು ಬಂದಿದೆ. ಚಿಕಿತ್ಸೆ ಮುಂದುವರೆಸಲಾಗಿದ್ದು, ರೋಗಿಗಳು ಶೀಘ್ರ ಗುಣಮುಖರಾಗಲಿದ್ದಾರ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Kunigal Hospital

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts