ಭಾರತ ಉನ್ನತ ಶಿಕ್ಷಣ ಆಯೋಗ ಕಾಯ್ದೆ 2018 ವಿರೋಧ

ಮೂಡಲಗಿ: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತರಲು ತೀರ್ಮಾನಿಸಿರುವ ಭಾರತ ಉನ್ನತ ಶಿಕ್ಷಣ ಆಯೋಗ ಕಾಯ್ದೆ 2018 ಅನುಷ್ಠಾನ ವಿರೋಧಿಸಿ ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಯ ಸಿಬ್ಬಂದಿ ವತಿಯಿಂದ ಅಖಿಲ ಭಾರತ ವಿಶ್ವವಿದ್ಯಾಲಯ ಮತ್ತು ಕಾಲೇಜು ಶಿಕ್ಷಕರ ಒಕ್ಕೂಟ, ರಾಜ್ಯ ಒಕ್ಕೂಟ ವತಿಯಿಂದ ಶುಕ್ರವಾರ ಕಪ್ಪು ಪಟ್ಟಿ ಕಟ್ಟಿಕೊಂಡು ಸಾಂಕೇತಿಕವಾಗಿ ಮುಷ್ಕರ ಹಮ್ಮಿಕೊಳ್ಳಲಾತ್ತು.

ಸರ್ಕಾರದ ಪ್ರತಿಗಾಮಿ ನೀತಿಯಿಂದ ಶಿಕ್ಷಣ ಕ್ಷೇತ್ರಕ್ಕೆ ಹಾಕಿರುವ ಹಲವು ನಿಬಂಧನೆಗಳು ಮಾರಕವಾಗಿವೆ. ಇದು ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸುವ ಹುನ್ನಾರವಾಗಿದೆ. 7ನೇ ವೇತನ ಆಯೋಗದ ಅನುಷ್ಠಾನಕ್ಕಾಗಿ ಶೇ.100ರಷ್ಟು ಸಹಾಯಧ ನೀಡುವುದು, ಹಂಗಾಮಿ, ಅರೆಕಾಲಿಕ, ಗುತ್ತಿಗೆ ಹಾಗೂ ಅತಿಥಿ ಉಪನ್ಯಾಸಕರಿಗೆ ಸಮಾನಾಂತರ ವೇತನ ಮತ್ತು ಸೇವಾ ವ್ಯವಸ್ಥೆಯನ್ನು ಕಲ್ಪಿಸಬೇಕು. ಹೊಸ ಪಿಂಚಣಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಬೇಕು.

6ನೇ ವೇತನ ಆಯೋಗದಲ್ಲಿ ಆಗಿರುವ ನ್ಯೂನ್ಯತೆಗಳನ್ನು ಸರಿಪಡಿಸಬೇಕು. ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಎಲ್ಲ ಬೋಧಕ, ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಮನವಿ ಮೂಲಕ ಒತ್ತಾಯಿಸಿದ್ದಾರೆ. ಪ್ರಾಚಾರ್ಯ ಡಾ.ಆರ್.ಎ.ಶಾಸ್ತ್ರಿಮಠ, ಪ್ರೊ.ಎಸ್.ಸಿ.ಮಂಟೂರ, ಪ್ರೊ.ಸಂಗಮೇಶ ಗುಜಗೊಂಡ, ಇತರರು ಉಪಸ್ಥಿತರಿದ್ದರು.