More

    48 ಬ್ರೇಕ್ ಇನ್‌ಸ್ಪೆಕ್ಟರ್‌ಗಳಿಗೆ ಮುಂಬಡ್ತಿ | ಬೇರೆಬೇರೆ ಕಚೇರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶ

    ಬೆಂಗಳೂರು: ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ)ಗಳಲ್ಲಿ ಸೇವೆ ಸಲ್ಲಿಸುತ್ತಿರುವ 48 ಮೋಟಾರು ವಾಹನ ನಿರೀಕ್ಷಕರಿಗೆ ಹಿರಿಯ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಮುಂಬಡ್ತಿ ಕೊಟ್ಟು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

    2023 ಫೆ.14 ಮತ್ತು 15ರಂದೇ ಇಲಾಖಾ ಮುಂಬಡ್ತಿ ಸಮಿತಿ ಸಭೆಯಲ್ಲಿ ಪದೋನ್ನತಿಗೆ ಅನುಮೋದನೆ ಸಿಕ್ಕಿತ್ತಾದರೂ ಮಾ.29ರಿಂದ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಬಡ್ತಿ ಪ್ರಕ್ರಿಯೆ ಮುಂದುವರಿದಿರಲಿಲ್ಲ. ಈಗ ಅಧಿಕೃತವಾಗಿ ಬಡ್ತಿ ಕೊಟ್ಟು ಅವರ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ನಿಯುಕ್ತಿಗೊಳಿಸಲಾಗಿದೆ.

    ಮುಂಬಡ್ತಿ ಆದೇಶ ಪತ್ರದಲ್ಲಿ “ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೆಳಕಂಡ ಮೋಟಾರು ವಾಹನ ನಿರೀಕ್ಷಕರನ್ನು ಹಿರಿಯ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಉಲ್ಲೇಖ (1) ಮತ್ತು (2)ರಲ್ಲಿ ಇಲಾಖಾ ಮುಂಬಡ್ತಿ ಸಮಿತಿ ಸಭೆಗಳನ್ನು ನಡೆಸಲಾಗಿತ್ತು. ದಿನಾಂಕ: 29-03-2023 ರಿಂದ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳಿಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಾಗಿದ್ದರ ಹಿನ್ನೆಲೆಯಲ್ಲಿ ಸ್ಥಳನಿಯುಕ್ತಿ ಆದೇಶವನ್ನು ನೀಡಲಾಗಿರಲಿಲ್ಲ. ಆದ್ದರಿಂದ ಮುಂಬಡ್ತಿ ಸಮಿತಿ ಸಭೆಗಳ ನಡವಳಿಗಳಂತೆ ಹಿರಿಯ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ವೇತನ ಶ್ರೇಣಿ ರೂ. 40900-1100-46400- 1250-53900-1450-62600-1650-72500-1900-78200 ರಲ್ಲಿ ಕೂಡಲೆ ಸ್ಥಾನವನ್ನು ಬಡ್ತಿ ನೀಡಿ ಅವರುಗಳ ಹೆಸರುಗಳ ಮುಂದೆ ಸೂಚಿಸಿರುವ ಸ್ಥಳಗಳಿಗೆ ನಿಯುಕ್ತಿಗೊಳಿಸಲಾಗಿದೆ” ಎಂದು ಬರೆದು ಮುಂಬಡ್ತಿ ಪಡೆದಿರುವವರ ಮಾಹಿತಿಯನ್ನು ನೀಡಲಾಗಿದೆ.

    48 ಬ್ರೇಕ್ ಇನ್‌ಸ್ಪೆಕ್ಟರ್‌ಗಳಿಗೆ ಮುಂಬಡ್ತಿ | ಬೇರೆಬೇರೆ ಕಚೇರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶ48 ಬ್ರೇಕ್ ಇನ್‌ಸ್ಪೆಕ್ಟರ್‌ಗಳಿಗೆ ಮುಂಬಡ್ತಿ | ಬೇರೆಬೇರೆ ಕಚೇರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶ48 ಬ್ರೇಕ್ ಇನ್‌ಸ್ಪೆಕ್ಟರ್‌ಗಳಿಗೆ ಮುಂಬಡ್ತಿ | ಬೇರೆಬೇರೆ ಕಚೇರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶ48 ಬ್ರೇಕ್ ಇನ್‌ಸ್ಪೆಕ್ಟರ್‌ಗಳಿಗೆ ಮುಂಬಡ್ತಿ | ಬೇರೆಬೇರೆ ಕಚೇರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts