More

    ಹಿಂದಿನ ಚುನಾವಣೆಯ ಶೇ.49 ಹಣ ವಾಪಸ್, ಶೇ.51ರಲ್ಲಿ ದೂರು ದಾಖಲು; ಮನೋಜ್ ಕುಮಾರ್ ಮೀನಾ 

    ಬೆಂಗಳೂರು: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕಳೆದ ವಿಧಾನಸಭೆ ಚುನಾವಣೆ ವೇಳೆ ವಶಪಡಿಸಿಕೊಂಡ ಶೇ.49 ರಷ್ಟು ನಗದನ್ನು ಸಂಬಂಧಪಟ್ಟವರಿಗೆ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ್ ಮೀನಾ ಹೇಳಿದರು.

    ಪ್ರೆಸ್ ಕ್ಲಬ್ ಆಯೋಜಿಸಿದ್ದ ಮಾಧ್ಯಮ ಸಂವಾದಲ್ಲಿ ಮಾತನಾಡಿದ ಅವರು, ಶೇ. 51 ಪ್ರಕರಣಗಳಲ್ಲಿ ಕೇಸು ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.ಶೇ.90 ರಷ್ಟು ಪ್ರಕರಣಗಳಲ್ಲಿ ಚಾರ್ಜ್‌ಶೀಟ್ ಹಾಕಲಾಗಿದೆ. ಈ ಪೈಕಿ ಶೇ.40 ರಷ್ಟು ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ ಎಂದರು.

    ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ನೆರೆಯ ತಮಿಳುನಾಡಿನಲ್ಲಿ ಏ.19ರಂದು ಮತದಾನ ನಡೆಯಲಿದೆ. ಈಗಾಗಿ ಏ.17ರಿಂದಲೇ ತಮಿಳುನಾಡು ಗಡಿಯನ್ನು ಸೀಜ್ ಮಾಡಲಾಗುವುದು ಎಂದು ತಿಳಿಸಿದರು.

    ಕರ್ನಾಟಕದಲ್ಲಿ ಮತದಾನ ನಡೆಯುವ ಎರಡು ದಿನಗಳ ಮುನ್ನ ತಮಿಳುನಾಡಿನವರು ಗಡಿಯನ್ನು ಸೀಜ್ ಮಾಡಲಿದ್ದಾರೆ. ತಮಿಳುನಾಡಿನಲ್ಲಿ ನಿಯೋಜಿತರಾಗಿರುವ ಕೇಂದ್ರ ಪಡೆಗಳು ರಾಜ್ಯಕ್ಕೆ ಆಗಮಿಸಲಿವೆ. ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಬಹಿರಂಗ ಪಡಿಸಲಾಗುವುದಿಲ್ಲ ಎಂದು ಹೇಳಿದರು.

    ಮನೆ ಮನೆ ಮತದಾನಕ್ಕೆ ಚಾಲನೆ

    ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳಲ್ಲಿ 2.88 ಕೋಟಿ ಮತದಾರರಿದ್ದಾರೆ. 11 ಸಾವಿರ ಸೇವಾ ಮತದಾರರಿದ್ದಾರೆ. 1.44 ಕೋಟಿ ಪುರುಷ, 1.43 ಮಹಿಳಾ ಹಾಗೂ 5.99 ಲಕ್ಷ ಯುವ ಮತದಾರರಿದ್ದಾರೆ. ಆಯ್ಕೆ ಮಾಡಿಕೊಂಡ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನರಿಗೆ ಮನೆಗೆ ತೆರಳಿ ಮತದಾನ ಮಾಡುವ ಪ್ರಕ್ರಿಯೆ ನಡೆದಿದೆ. ಏ.18ರ ವರೆಗೂ ಈ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

    ಮತಗಟ್ಟೆಗಳಲ್ಲಿ ಮೂಲಸೌಕರ್ಯ

    ಮೊದಲ ಹಂತದ ಮತದಾನಕ್ಕೆ 30, 602 ಮತಗಟ್ಟೆಗಳನ್ನು ತೆರೆಯಲಾಗಿದೆ. ಮತದಾನಕ್ಕೆ ಅನುಕೂಲವಾಗುವಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲಾಗಿವುದು. ಶೇ.50ರಷ್ಟು ಮತಗಟ್ಟೆಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ಮತಗಟ್ಟೆಯಲ್ಲಿ ತುರ್ತು ಸಂದರ್ಭಗಳನ್ನು ನಿಭಾಯಿಸಲು ಹತ್ತಿರದಲ್ಲೇ ಆಂಬುಲೆನ್ಸ್ ಗುರುತಿಸಲಾಗುತ್ತಿದೆ ಎಂದರು.
    ಈವರೆಗೆ ನಗದು ಸೇರಿದಂತೆ 345 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಮದ್ಯ ಜಪ್ತಿ ಮಾಡಲಾಗಿದೆ ಎಂದು ಮನೋಜ್ ಕುಮಾರ್ ಮೀನಾ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts