ಬಂಗಾಳ ಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ; ಕಲ್ಕತ್ತಾ, ಓಡಿಸ್ಸಾದಲ್ಲಿ ಕಂಪಿಸಿದ ಭೂಮಿ

Earthquake
Published on

ನವದೆಹಲಿ: ಮಂಗಳವಾರ (ಫೆಬ್ರವರಿ 25) ಮುಂಜಾನೆ ಬಂಗಾಳ ಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಮುಂಜಾನೆ 6:10ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ನೆಲಮಟ್ಟದಿಂದ 91 ಕಿಲೋಮೀಟರ್​ ಆಳದಲ್ಲಿ ಕಂಪನ ಕೇಂದ್ರವನ್ನು ಗುರುತಿಸಲಾಗಿದ್ದು, ಪಶ್ಚಿಮ ಬಂಗಾಳ, ಓಡಿಸ್ಸಾದಲ್ಲೂ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ವರದಿಯಾಗಿದೆ.

ಕೆಲ ದಿನಗಳ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು. ರಿಕ್ಟರ್ ಮಾಪನದಲ್ಲಿ ಶೇ. 04ರಷ್ಟು ದಾಖಲಾಗಿದ್ದು, ಭೂಕಂಪದ ವೇಳೆ ದೊಡ್ಡ ಶಬ್ದವೊಂದು ಕೇಳಿಸಿತು ಎಂದು ಸ್ಥಳೀಯರು ತಿಳಿಸಿದ್ದರು. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net