More

  5.20 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲ

  ಬೀದರ್: ರಾಜ್ಯ ಸರ್ಕಾರವು ಜನವರಿ 1 ರಿಂದ ಪೂರ್ವಾನ್ವಯ ಆಗುವಂತೆ ಬಿಡುಗಡೆ ಮಾಡಿರುವ ಶೇ 4 ರಷ್ಟು ತುಟ್ಟಿ ಭತ್ಯೆಯಿಂದ ರಾಜ್ಯದ ಕರ್ತವ್ಯ ನಿರತ 5.20 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.
  ನಿಗಮ- ಮಂಡಳಿ, ಅನುದಾನಿತ ಸಂಸ್ಥೆಗಳ 3 ಲಕ್ಷ ನೌಕರರು ಹಾಗೂ 4.5 ಲಕ್ಷ ನಿವೃತ್ತ ನೌಕರರಿಗೂ ನೆರವಾಗಲಿದೆ ಎಂದು ಹೇಳಿದ್ದಾರೆ.
  ಶೇ 4 ರಷ್ಟು ತುಟ್ಟಿ ಭತ್ಯೆ ಬಿಡುಗಡೆಯಿಂದ ನೌಕರರ ಮೂಲ ವೇತನದಲ್ಲಿ ಶೇ 31 ರಿಂದ ಶೇ 35 ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.
  ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಟ್ಟಿ ಭತ್ಯೆ ಬಿಡುಗಡೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts