More

    ಕಾಶ್ಮೀರದಲ್ಲಿ ವಾಯುಪಡೆಯ ವಾಹನದ ಮೇಲೆ ಉಗ್ರರ ದಾಳಿ, ಐವರು ಯೋಧರಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸುರನ್‌ಕೋಟೆ ಪ್ರದೇಶದಲ್ಲಿ ಐಎಎಫ್‌ನ ಇಂದು ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕೆಲವು ಸೇನಾ ಸಿಬ್ಬಂದಿ ಹಾಗೂ 5 ಭಾರತೀಯ ವಾಯುಪಡೆಯ ಯೋಧರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇದನ್ನೂ ಓದಿ: ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಬಂಧನ: ಸಿಐಡಿ ಕಚೇರಿಗೆ ಬಿಗಿ ಭದ್ರತೆ

    ವರದಿಯ ಪ್ರಕಾರ ಭಯೋತ್ಪಾದಕರು ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಸುಮಾರು 30 ಸುತ್ತು ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿರುವ ಐವರಲ್ಲಿ ಓರ್ವ ವಾಯುಪಡೆ ಸೇನಾ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದು ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಅವರೆಲ್ಲರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

    ಜೆ & ಕೆ ಯ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ವಾಹನಗಳ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಶಾಸಿತಾರ್ ಬಳಿಯ ಸಾಮಾನ್ಯ ಪ್ರದೇಶದ ವಾಯುನೆಲೆಯೊಳಗೆ ವಾಹನಗಳನ್ನು ಭದ್ರಪಡಿಸಲಾಗಿದೆ. ಸೇನಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ.

    ಇಂದು ಸಂಜೆ ಜಿಲ್ಲೆಯ ಸೂರನಕೋಟೆ ಪ್ರದೇಶದ ಸನಾಯಿ ಟಾಪ್ ಕಡೆಗೆ ವಾಹನಗಳು ತೆರಳುತ್ತಿದ್ದಾಗ ಶಶಿಧರ್ ಬಳಿ ಉಗ್ರರ ದಾಳಿ ನಡೆದಿದೆ ಎಂದು ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ. ಪೂಂಚ್ ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದ ಭಾಗವಾಗಿದ್ದು, ಮೇ 25 ರಂದು ಆರನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

    ಬಿಜೆಪಿ ಸೇರಿದ ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಲವ್ಲಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts