More

  ಕಾಂಗ್ರೆಸ್​ ಅಭ್ಯರ್ಥಿ ಮೃಣಾಲ್​ ಪರ ಹಣ ಹಂಚಿಕೆ ಆರೋಪ; ಪರಾಜಿತ ಅಭ್ಯರ್ಥಿ ಸೇರಿದಂತೆ ಐವರು ಅರೆಸ್ಟ್​

  ಬೆಳಗಾವಿ: ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯದಲ್ಲಿ ಎರಡನೇ ಹಂತದ ಮತದಾನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಇದೀಗ ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಮೃಣಾಲ್​ ಹೆಬ್ಬಾಳ್ಕರ್​ ಪರ ಹಣ ಹಂಚುತ್ತಿದ್ದ ಐವರನ್ನು ಬಿಜೆಪಿ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

  ಘಟನೆಯು ಬೆಳಗಾವಿ ಜಿಲ್ಲೆ ಗೋಕಾಕ್​ ವಿಧಾನಸಭಾ ಕ್ಷೇತ್ರದ ಅಂಕಲಗಿ ಗ್ರಾಮದಲ್ಲಿ ನಡೆದಿದ್ದು, ಬಂಧಿತರಿಂದ 20 ಲಕ್ಷ ರೂಪಾಯಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಂಕಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತರನ್ನು 2023ರ ಕಾಂಗ್ರೆಸ್​ ಪರಾಜಿತ ಅಭ್ಯರ್ಥಿ ಡಾ.ಮಹಾಂತೇಶ್ ಕಡಾಡಿ, ಭದ್ರಾವತಿ ಮೂಲದ ಇಬ್ಬರು ಯುವಕರು ಹಾಗೂ ಹರ್ಷಾ ಶುಗರ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಎಂದು ಗುರುತಿಸಲಾಗಿದೆ.

  ಈ ಕುರಿತು ಪ್ರತಿಕ್ರಿಯಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಅಂಕಲಗಿ ಗ್ರಾಮದಲ್ಲಿ ಹಣ ಹಂಚುತ್ತಿರುವ ಬಗ್ಗೆ ನಮಗೆ ಬಿಜೆಪಿ ಕಾರ್ಯಕರ್ತರು ಕರೆ ಮಾಡಿ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ತೆರಳಿ ಐವರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಇಬ್ಬರು ಕಾಂಗ್ರೆಸ್​ ಅಭ್ಯರ್ಥಿ ಪರ ಹಣ ಹಂಚಲು ಬಂದಿದ್ದಾಗಿ ಒಪ್ಪಿಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  See also  ರಾಜಕೀಯ ಪ್ರವೇಶಿಸಲಿದ್ದಾರ ಲಾಲು ಕಿರಿಯ ಪುತ್ರಿ; ಮಾರ್ಮಿಕವಾಗಿ ನುಡಿದ ರೋಹಿಣಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts