More

    5 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಗುರುಭವನ

    ಭಟ್ಕಳ: ನಾನು ಶಾಸಕನಾಗಿದ್ದಾಗ ಭಟ್ಕಳದಲ್ಲಿ ಗುರುಭವನ ನಿರ್ಮಿಸಲು 10 ಗುಂಟೆ ಜಾಗ ಮಂಜೂರಿ ಮಾಡಲಾಗಿದೆ. 5 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜದಲ್ಲೇ ಉತ್ತಮ ಮತ್ತು ಸುಸಜ್ಜಿತ ಗುರುಭವನ 1 ವರ್ಷದಲ್ಲಿ ನಿರ್ಮಿಸಿಕೊಡುವ ಗುರಿ ಹೊಂದಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

    ತಾಲೂಕಿನ ಮುರ್ಡೇಶ್ವರದ ಆರ್ .ಎನ್. ಶೆಟ್ಟಿ ಸಭಾಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ, ಜಪಾನ್ ದೇಶದಲ್ಲಿ ಶಿಕ್ಷಕರಿಗೆ ಅತ್ಯುನ್ನತ ಗೌರವ ಇದ್ದು, ಇಂತಹ ಗೌರವದ ಸ್ಥಾನವನ್ನು ನಮ್ಮ ದೇಶದ ಶಿಕ್ಷಕರಿಗೂ ಸಿಗುವಂತಾಗಬೇಕು. ಎಲ್ಲೆಡೆ ಇಂಗ್ಲಿಷ್ ವ್ಯಾಮೋಹದಿಂದ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ. ಆದರೆ, ನಮ್ಮ ಸರ್ಕಾರಿ ಶಾಲೆಗಳಲ್ಲಿ ತರಬೇತಿ ಪಡೆದ ಅತ್ಯುತ್ತಮ ಶಿಕ್ಷಕರು, ಊಟ ಸೇರಿದಂತೆ ಉತ್ತಮ ಸೌಲಭ್ಯಗಳಿದ್ದರೂ ಮಕ್ಕಳ ಹಾಜರಾತಿ ಕಡಿಮೆ ಇದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಾಗಬೇಕು ಎಂದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಭಟ್ಕಳದ ಅರ್ಬನ್ ಬ್ಯಾಂಕ್, ಸಾಲಗದ್ದೆ ಸ್ಪೋರ್ಟ್ಸ ಕ್ಲಬ್, ರಂಜನ್ ಇಂಡೇನ್ ಎಜೆನ್ಸಿ ಹಾಗೂ ದಿ. ಕೆ.ವಿ. ಪ್ರಭು ಸ್ಮರಣಾರ್ಥ ಕೊಡಮಾಡುವ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಶಿಕ್ಷಕಿಯರ ರೈತ ಗೀತೆ ಮತ್ತು ಜಾನಪದ ಹಾಡು ಎಲ್ಲರ ಗಮನ ಸೆಳೆಯಿತು.

    ಭಟ್ಕಳ ಸೇರಿದಂತೆ ಕಾರವಾರ ಶೈಕ್ಷಣಿಕ ಜಿಲ್ಲೆಯಿಂದ ಸಾವಿರಕ್ಕೂ ಅಧಿಕ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಾವಳ್ಳಿ-2 ಗ್ರಾಪಂ ಅಧ್ಯಕ್ಷೆ ನಾಗರತ್ನ ಪಡಿಯಾರ ಅಧ್ಯಕ್ಷತೆ ವಹಿಸಿದ್ದರು.

    ತಹಸೀಲ್ದಾರ್ ತಿಪ್ಪೇಸ್ವಾಮಿ, ತಾಪಂ ಇಒ ಪ್ರಭಾಕರ ಚಿಕ್ಕನಮನೆ, ಭಟ್ಕಳ ಅರ್ಬನ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಸಂತ ಶಾಸ್ತ್ರಿ, ಕುಮಟಾದ ಡಯಟ್ ಅಧಿಕಾರಿ ಎಂ.ಜಿ. ನಾಯ್ಕ, ಮಾವಳ್ಳಿ-1 ಗ್ರಾಪಂ ಅಧ್ಯಕ್ಷೆ ನಯನಾ ನಾಗೇಶ ನಾಯ್ಕ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನಂತ ಗಾಂವಕರ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಸುಧೀರ ನಾಯ್ಕ, ಭಟ್ಕಳ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ, ಭಟ್ಕಳ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಲ್ಲಾಸ ನಾಯ್ಕ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ, ಎಂ.ಎನ್. ನಾಯ್ಕ, ಎಂ.ಡಿ. ರಫೀಕ್ ಮುಂತಾದವರಿದ್ದರು.

    ಡಿಡಿಪಿಐ ಲತಾ ನಾಯ್ಕ ಸ್ವಾಗತಿಸಿದರು. ಶಿಕ್ಷಕರಾದ ಶ್ರೀಧರ ಶೇಟ್, ಪರಮೇಶ್ವರ ನಾಯ್ಕ ನಿರೂಪಿಸಿದರು. ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ. ಮೊಗೇರ ವಂದಿಸಿದರು. ಮಂಜುಳಾ ಶಿರೂರು, ಪ್ರತಿಭಾ ಕರ್ಕಿಕರ್ ಕಾರ್ಯಕ್ರಮ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts