More

    5 ಕೋಟಿ ರೂ. ವಿದ್ಯಾರ್ಥಿ ವೇತನ

    ಬೆಳಗಾವಿ: ಬೀದರನಲ್ಲಿ ಕೇಂದ್ರ ಕಚೇರಿ ಹೊಂದಿರುವ ಶಾಹೀನ್ ಶಿಕ್ಷಣ ಸಂಸ್ಥೆಯು ಪ್ರಸಕ್ತ ಸಾಲಿನ ನೀಟ್ ದೀರ್ಘ ಕಾಲದ ರಿಪೀಟರ್‌ಗಳಿಗೆ 5 ಕೋಟಿ ರೂ. ವಿದ್ಯಾರ್ಥಿ ವೇತನ ಪ್ರಕಟಿಸಿದೆ ಎಂದು ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.

    ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕರೊನಾ ಹಾಗೂ ಅತಿವೃಷ್ಟಿಯಿಂದಾಗಿ ಪಾಲಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹಾಗಾಗಿ, ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಮೂಲಕ ನೆರವಾಗಲು ನಿರ್ಧರಿಸಲಾಗಿದೆ ಎಂದರು.
    ಸಂಸ್ಥೆಯ ದೇಶದ ಎಲ್ಲ ಶಾಖೆಗಳಲ್ಲೂ ವಿದ್ಯಾರ್ಥಿ ವೇತನ ನೀಡಲಾಗುವುದು. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ನೀಡಿ, ವಿದ್ಯಾರ್ಥಿಗಳು ನೀಟ್‌ನಲ್ಲಿ ಪಡೆದ ಅಂಕ ಆಧರಿಸಿ ವಿದ್ಯಾರ್ಥಿ ವೇತನ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

    5 ಕೋಟಿ ರೂ., ವಿದ್ಯಾರ್ಥಿ, ವೇತನ, ಪ್ರಸಕ್ತ, ಸಾಲಿನ, ನೀಟ್, ರಿಪೀಟರ್‌ಗಳಿಗೆ, ಶಾಹೀನ್, ಶಿಕ್ಷಣ, ಸಂಸ್ಥೆ, ಕೊಡುಗೆ, ವಿದ್ಯಾರ್ಥಿ ವೇತನದಿಂದ ಎರಡು ಸಾವಿರ ವಿದ್ಯಾರ್ಥಿಗಳಿಗೆ ಪ್ರಯೋಜನ ಆಗುವ ನಿರೀಕ್ಷೆ ಇದೆ. ಮಹಾಮಾರಿ ಕರೊನಾ ಕಾರಣದಿಂದ ಪಾಲಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ನೀಟ್ ತರಬೇತಿ ನೀಡಲಾಗುವುದು. ನಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿ ಬೀದರನ ಕಾರ್ತಿಕ ರೆಡ್ಡಿ, ನೀಟ್‌ನಲ್ಲಿ ಅಖಿಲ ಭಾರತ ಮಟ್ಟದಲ್ಲಿ 9ನೇ ಹಾಗೂ ಕರ್ನಾಟಕಕ್ಕೆ ಮೊದಲ ರ‌್ಯಾಂಕ್ ಗಳಿಸಿದ್ದು, ಸಂಸ್ಥೆಯ ಕೀರ್ತಿ ಹೆಚ್ಚಿಸಿದೆ ಎಂದರು.

    ದೇಶದಲ್ಲಿ 42 ಶಾಖೆ: 32 ವರ್ಷಗಳ ಹಿಂದೆ 16 ಮಕ್ಕಳಿಂದ ಆರಂಭವಾಗಿರುವ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಇಂದು 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸಂಸ್ಥೆಯು ಕರ್ನಾಟಕ ಸೇರಿ ದೇಶದ ವಿವಿಧೆಡೆ ಒಟ್ಟು 42 ಶಾಖೆ ಹೊಂದಿದೆ. ಗುಣಮಟ್ಟದ ಶಿಕ್ಷಣದ ಮೂಲಕ ದ್ವಿತೀಯ ಪಿಯುಸಿ, ಸಿಇಟಿ, ನೀಟ್ ಫಲಿತಾಂಶದಲ್ಲಿ ರಾಜ್ಯ, ರಾಷ್ಟ್ರದ ಗಮನ ಸೆಳೆದಿದೆ ಎಂದು ಮಾಹಿತಿ ನೀಡಿದರು.

    ಪ್ರವಶೇಕ್ಕೆ ನ.15 ಕೊನೆಯ ದಿನ: ವಿದ್ಯಾರ್ಥಿಗಳು ಡಿಡಿಡಿ.ಛಿಛ್ಞಿಜ್ಟಟ್ಠ.ಟ್ಟಜ ವೆಬ್‌ಸೈಟ್‌ನಲ್ಲಿ ಉಚಿತವಾಗಿ ಹೆಸರು ನೋಂದಾಯಿಸಿ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬಹುದು. ನೀಟ್ ದೀರ್ಘ ಕಾಲದ ರಿಪೀಟರ್ ಪ್ರವೇಶಕ್ಕೆ ನ. 15 ಕೊನೆಯ ದಿನವಾಗಿದೆ. ಮಾಹಿತಿಗೆ ಟೋಲ್ ಫ್ರೀ ಸಂಖ್ಯೆ 18001216235ಗೆ ಸಂಪರ್ಕಿಸಬಹುದು ಎಂದು ಡಾ. ಅಬ್ದುಲ್ ಖದೀರ್ ತಿಳಿಸಿದರು. ಸಂಸ್ಥೆಯಿಂದ ತರಬೇತಿ ಪಡೆದು ರಾಜ್ಯಕ್ಕೆ ತೃತೀಯ ರ‌್ಯಾಂಕ್ ಪಡೆದ ಅರ್ಬಾಜ್ ಅಹಮ್ಮದ್, ಶಾಹೀನ್ ಬೆಳಗಾವಿ ಅಧ್ಯಕ್ಷ ಇಕ್ಬಾಲ್ ಅಹ್ಮದ್, ಶಾಹೀನ್ ಗ್ರೂಪ್ ಬೀದರ ನಿರ್ದೇಶಕ ಆಸೀಫ್ ಅಲಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts