ಜಮ್ಮು ಕಾಶ್ಮೀರದಲ್ಲಿ ಸಿಆರ್​ಪಿಎಫ್​ ಯೋಧರ ಮೇಲೆ ಉಗ್ರರ ದಾಳಿ: ಐವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದ್ದ ಆತ್ಮಾಹುತಿ ದಾಳಿಯ ನಂತರ ಕೇಂದ್ರೀಯ ಮೀಸಲು ಪೊಲೀಸ್​ ಪಡೆ ಸಿಆರ್​ಪಿಎಫ್​ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ದೊಡ್ಡ ಪ್ರಮಾಣದ ದಾಳಿ ನಡೆಸಿದ್ದು ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.

ಅನಂತ್​ನಾಗ್​ ಪಟ್ಟಣದ ಕೆಪಿ ಚೌಕ್​ನ ಬಸ್​ ನಿಲ್ದಾಣದಲ್ಲಿ ಬಳಿ, ಬೈಕ್​ನಲ್ಲಿ ಬಂದ ಉಗ್ರರು ಸಿಆರ್​ಪಿಎಫ್​ ಯೋಧರ ಮೇಲೆ ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಯೋಧರೂ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಫೆಬ್ರವರಿ 14 ರಂದು ಪುಲ್ವಾಮಾದದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಆರ್​ಪಿಎಫ್​ ಯೋಧರಿದ್ದ ಬಸ್​ ಗುರಿಯಾಗಿಸಿಕೊಂಡು ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 40 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು. ಜೈಷ್​ ಎ ಮೊಹಮದ್​ ಉಗ್ರರು ದಾಳಿಯ ಹೊಣೆ ಹೊತ್ತುಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ವಾಯುಪಡೆ ಪಾಕ್​ನ ಬಾಲಾಕೋಟ್​ನಲ್ಲಿದ್ದ ಉಗ್ರರ ನೆಲೆಯ ಮೇಲೆ ದಾಳಿ ನಡೆಸಿತ್ತು. ದಾಳಿಯಲ್ಲಿ 200 ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದರು.

Leave a Reply

Your email address will not be published. Required fields are marked *