

ಬೆಂಗಳೂರು: ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ರಾಜ್ಯ ರಾಜಧಾನಿಯಲ್ಲಿ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಜ್ಞ ಎ ಪ್ರಸಾದ್ ಹೇಳಿದ್ದಾರೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ರಾತ್ರಿ ಹಗುರ ಹಾಗೂ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ದಕ್ಷಿಣ ಒಳನಾಡಿಗೆ ಇಂದಿನಿಂದ ಐದು ದಿನಕಾಲ ಮಳೆ ಇರಲಿದ್ದು, ಹಲವು ಜಿಲ್ಲೆಯಲ್ಲಿಯೂ ಕೂಡಾ ಮಳೆಯಾಗಲಿದೆ. ಇನ್ನು ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮಳೆಯಾಗುವ ಹಿನ್ನೆಲೆ ಇಂದು ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಾಗಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯಾತೆ ಇದೆ ಎನ್ನಲಾಗುತ್ತಿದೆ.