ನಿಯಂತ್ರಣ ತಪ್ಪಿ ಟೀ ಅಂಗಡಿಗೆ ಲಾರಿ ಡಿಕ್ಕಿ; 5 ಮಂದಿ ದುರ್ಮರಣ

Tempo Accident
Published on

ಚೆನ್ನೈ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಟೀ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿದ ಪುದುಕೊಟ್ಟೈನಲ್ಲಿ ನಡೆದಿದೆ.

ತಿರುಚ್ಚಿ - ರಾಮೇಶ್ವರಂ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುದುಕೊಟ್ಟೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಪುದುಕೊಟ್ಟೈನ ತಿರುಚ್ಚಿ - ರಾಮೇಶ್ವರಂ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಐವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಘಟನೆಯಲ್ಲಿ 19ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪುದುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net