ಉತ್ತರ ಪ್ರದೇಶದಲ್ಲಿ ಹಳಿತಪ್ಪಿದ ನ್ಯೂ ಫರಕ್ಕಾ ಎಕ್ಸ್​ಪ್ರೆಸ್​: ಆರು ಜನರ ಸಾವು

ರಾಯ್​ಬರೇಲಿ: ಉತ್ತರ ಪ್ರದೇಶದ ರಾಯ್​ಬರೇಲಿ ಜಿಲ್ಲೆಯ ಹರ್​ಚಂದ್​ಪುರ ರೈಲ್ವೆ ನಿಲ್ದಾಣದ ಬಳಿ ರೈಲು ಹಳಿತಪ್ಪಿದೆ. ದುರ್ಘಟನೆಯಲ್ಲಿ ಆರು ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ನ್ಯೂ ಫರಕ್ಕಾ ಎಕ್ಸ್​ಪ್ರೆಸ್​ ರೈಲಿನ ಇಂಜಿನ್​ ಮತ್ತು 6 ಬೋಗಿಗಳು ಹಳಿತಪ್ಪಿವೆ. ಲಖನೌ, ವಾರಾಣಸಿಯಿಂದ ಎನ್​ಡಿಆರ್​ಎಫ್​ ತಂಡ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿದ್ದಾರೆ.

ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 5 ಲಕ್ಷ ರೂ. ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ರೂ. ಮತ್ತು ಗಾಯಗೊಂಡ ಇತರರಿಗೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್​ ಘೋಯಲ್​ ಘೋಷಿಸಿದ್ದಾರೆ.