

ಅಮೃತಸರ: ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸೊಂದು (Bus) ಕಾಲುವೆಗೆ ಉರುಳಿ ಐದು ಮಂದಿ ಮೃತಪಟ್ಟು, 25ಕ್ಕೂ ಅಧಿಕ ಜನರು ಗಂಭೀರವಾಗು ಗಾಯಗೊಂಡಿರುವ ಘಟನೆ ಪಂಜಾಬಿನ ಫರೀದ್ಕೋಟ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಕುರಿತು ಮಾತನಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಜ್ಞಾ ಜೈನ್, ಫರೀದ್ಕೋಟ್ನಿಂದ ಬಸ್ (Bus) ಅಮೃತಸರಕ್ಕೆ ತೆರಳುತ್ತಿದ್ದಾಗ ಕೊಟ್ಕಾಪುರದ ಬಳಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾಲುವೆಗೆ ಉರುಳಿ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ (Bus) ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಕಾಲುವೆಯಿಂದ ಬಸ್ಸನ್ನು ಹೊರತೆಗೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಜ್ಞಾ ಜೈನ್ ತಿಳಿಸಿದ್ದಾರೆ.