

Heart Health: ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಈ ಆಹಾರಗಳನ್ನು ಸೇರಿಸುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ನಿಯಂತ್ರಿಸುವುದರ ಜತೆಗೆ ಹೃದಯದ ಆರೋಗ್ಯವನ್ನೂ ಸುಧಾರಿಸಲು ಸಹಾಯ ಮಾಡುತ್ತದೆ. ಇಲ್ಲಿ ತಿಳಿಸಲಾಗಿರುವ ಆಹಾರ ಕ್ರಮವನ್ನು ನಿಮ್ಮ ದಿನನಿತ್ಯದ ಆಹಾರ ಪಟ್ಟಿಯಲ್ಲಿ ಸೇರಿಸಿಕೊಳ್ಳುವುದು ಉತ್ತಮ.
ಕಪ್ಪು ಬೀನ್ಸ್: ಕಪ್ಪು ಬೀನ್ಸ್ ಉತ್ತಮವಾದ ಖನಿಜಗಳಿಂದ ತುಂಬಿದ್ದು, ಇದರಲ್ಲಿನ ಮೆಗ್ನೀಸಿಯಮ್, ಫೋಲೇಟ್ ಮತ್ತು ಉತ್ಕರ್ಷಣ ನಿರೋಧಕಗಳ ಬಳಕೆಯಿಂದ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು. ಅಲ್ಲದೇ, ಫೈಬರ್ ರಕ್ತದಲ್ಲಿನ ಸಕ್ಕರೆ ಮತ್ತು ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿ ಸಹಾಯ ಮಾಡುತ್ತದೆ.
ಈ ಬೀಜಗಳು ಆಲ್ಫಾ-ಲಿನೋಲೆನಿಕ್ ಆಮ್ಲ ಸೇರಿದಂತೆ ಒಮೆಗಾ-3 ಕೊಬ್ಬಿನಾಮ್ಲಗಳ ಉತ್ತಮ ಮೂಲವಾಗಿದೆ. ಒಮೆಗಾ-3 ಕೊಬ್ಬಿನಾಮ್ಲಗಳು ಒಟ್ಟು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದು ಸೇರಿದಂತೆ ವಿವಿಧ ಧನಾತ್ಮಕ ಪರಿಣಾಮಗಳನ್ನು ಹೊಂದಿವೆ.
ಸಾಲ್ಮನ್ ಹೃದಯದ ಆರೋಗ್ಯಕ್ಕೆ ಅತ್ಯುತ್ತಮವಾದ ಆಹಾರ. ಏಕೆಂದರೆ ಇದರಲ್ಲಿ ಒಮೆಗಾ 3 ಸಮೃದ್ಧವಾಗಿದೆ. ಒಮೆಗಾ 3 ಎಂದು ಕರೆಯಲ್ಪಡುವ ಆರೋಗ್ಯಕರ ಕೊಬ್ಬುಗಳು ರಕ್ತದೊತ್ತಡವನ್ನು ಕಡಿಮೆ ಮಾಡುವುದರ ಜತೆಗೆ ಹೃದಯದ ಸಮಸ್ಯೆಗಳ ಅಪಾಯವನ್ನು ತಡೆಗಟ್ಟಬಹುದು. ಸಾಲ್ಮನ್ ಅಥವಾ ಇತರ ಎಣ್ಣೆಯುಕ್ತ ಮೀನುಗಳನ್ನು ವಾರಕ್ಕೆ ಎರಡು ಬಾರಿ ಸೇವಿಸಬಹುದಾಗಿದೆ.
ವಾಲ್‌ನಟ್‌ಗಳ ಸೇವನೆಯು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ನಿಮ್ಮ ಹೃದಯದ ಅಪಧಮನಿಯ ಉರಿಯೂತವನ್ನು ನಿಯಂತ್ರಿಸುತ್ತದೆ . ಒಮೆಗಾ 3 ಕೊಬ್ಬಿನಾಮ್ಲಗಳು, ಮೊನೊಸಾಚುರೇಟೆಡ್ ಕೊಬ್ಬುಗಳು, ಸಸ್ಯ ಸ್ಟೆರಾಲ್ಗಳು ಮತ್ತು ಫೈಬರ್ಗಳು ವಾಲ್ನಟ್ನಲ್ಲಿ ಹೇರಳವಾಗಿವೆ.
ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳ ಪೋಷಕಾಂಶಗಳನ್ನು ಹೊಂದಿರುವ ಹಸಿರು ತರಕಾರಿಗಳಲ್ಲಿ ವಿಟಮಿನ್ ಕೆ ಹೇರಳವಾಗಿದೆ. ಇದು ನಿಮ್ಮ ಅಪಧಮನಿಗಳನ್ನು ರಕ್ಷಿಸಲು ಮತ್ತು ಆರೋಗ್ಯಕರ ರಕ್ತ ಹೆಪ್ಪುಗಟ್ಟುವಿಕೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.