ಬೆಂಗಳೂರು: ಕರ್ನಾಟಕ ಶಾಳಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025ನೇ ಸಾಲಿನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕಾರ್ಯಕ್ಕೆ ಭಾಗವಹಿಸುವ ಅಧಿಕಾರಿ/ಸಿಬ್ಬಂದಿ ಸಂಭಾವನೆ ಮತ್ತು ಭತ್ಯೆಗಳನ್ನು ಪರಿಷ್ಕರಣೆ ಮಾಡಿದ್ದು, ಶೇ.5ರಷ್ಟು ಹೆಚ್ಚಳ ಮಾಡಿದೆ.
ಪರೀಕ್ಷಾ ಕಾರ್ಯಕ್ಕಾಗಿ ಪರೀಕ್ಷಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಅಭಿರಕ್ಷಕರು (ಕಸ್ಟೋಡಿಯನ್), ಕೊಠಡಿ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರಗಳ ಸಹಾಯಕರು, ‘ಡಿ’ ದರ್ಜೆ ನೌಕರರು, ಸ್ಥಾನಿಕ ಜಾಗೃತ ದಳ, ಪೊಲೀಸ್ ಸಿಬ್ಬಂದಿ, ಮೌಲ್ಯಮಾಪನ ಕೇಂದ್ರದ ಜಂಟಿ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರ ಸಂಭಾವನೆ ಪರಿಷ್ಕರಿಸಲಾಗಿದೆ.
ಪ್ರಾಯೋಗಿಕ ಪರೀಕ್ಷೆಗಳ ಜೆಟಿಎಸ್ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಮಂಡಳಿ ನಿರ್ದೇಶಕರು ಜ್ಞಾಪನ ಹೊರಡಿಸಿದ್ದಾರೆ.