200 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು; 5 ಮಂದಿ ಸ್ಥಳದಲ್ಲೇ ಸಾವು

accident
Published on

ಚಂಬಾ: ಕಾರು ಪ್ರಪಾತಕ್ಕೆ ಉರುಳಿ ಐದು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಹಿಮಾಚಲ ಪ್ರದೇಶದ ಚಂಬಾದಲ್ಲಿ ನಡೆದಿದೆ.

ಒಂದು ಕಾರಿನಲ್ಲಿ ಒಟ್ಟು 9 ಮಂದಿ ಪ್ರಯಾಣ ಮಾಡುತ್ತಿದ್ದರು. ಚಾಲಕ ಸೇರಿ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖರಮುಖ್​-ಭರ್ಮೌರ್​ ರಸ್ತೆಯಲ್ಲಿರುವ ಸುಂಕು ತಾಪ್ರಿ ಬಳಿ ಕಾರು 200 ಅಡಿ ಆಳದ ಕಂದಕ್ಕೆ ಕಾರು ಉರುಳಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕಾರನ್ನು ಚಾಲಕ ಅತ್ಯಂತ ವೇಗವಾಗಿ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸುತ್ತಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಯಾವುದೇ ವಾಹನ ಗುದ್ದಿದ್ದಲ್ಲ. ಆಯತಪ್ಪಿಯೇ ಪ್ರಪಾತಕ್ಕೆ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net