More

    ಮರಕ್ಕೆ ಡಿಕ್ಕಿ ಹೊಡೆದ ಕಾರು; ಐದು ಜನರು ಮೃತ್ಯು

    ಭೋಪಾಲ್: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾದಲ್ಲಿ ನಡೆದಿದೆ.

    ಘಟನೆಯು ರಾಷ್ಟ್ರೀಯ ಹೆದ್ದಾರಿ 43ರಲ್ಲಿ ಸಂಭವಿಸಿದ್ದು, ಘುಂಗುಟಿ ಪೊಲೀಸ್​ ಠಾಣೆ ವ್ಯಾಪ್ತಿಯ ಮಜ್ಗಾವಾ ಗ್ರಾಮದ ಬಳಿ ಬೆಳಗಿನ ಜಾವ 3 ಘಂಟೆ ಸುಮಾರಿಗೆ ಅಪಘಾತ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇದನ್ನೂ ಓದಿ: VIDEO| ಗುಜರಾತ್​ನಲ್ಲಿ ಸೇತುವೆ ಕುಸಿತ; 10 ಮಂದಿ ನೀರು ಪಾಲು

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಹಾಯಕ ಸಬ್​ಇನ್ಸ್​ಪೆಕ್ಟರ್​ ಶೈಲೇಂದ್ರ ಚತುರ್ವೇದಿ ಉಮಾರಿಯಾದಿಂದ ಶೆಹದೋಲ್​ ಕಡೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ಧಾರೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

    ಮೃತರೆಲ್ಲರೂ 30-35 ವರ್ಷ ಆಸುಪಾಸಿನವರು ಎಂದು ತಿಳಿದು ಬಂದಿದ್ದು, ಅವರ ಕುಟುಂಬದ ಸದಸ್ಯರನ್ನು ಸಂಪರ್ಕಿಸಲಾಗಿದೆ. ಈ ಸಂಬಂಧ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಹಾಯಕ ಸಬ್​ಇನ್ಸ್​ಪೆಕ್ಟರ್​ ಶೈಲೇಂದ್ರ ಚತುರ್ವೇದಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts