More

  ಆಟೋಗೆ ಗುದ್ದಿದ ಕಂಟೇನರ್​ ಲಾರಿ; 5 ಮಂದಿ ಮೃತ್ಯು

  ಲಖನೌ: ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ದೆಹಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದು ಪೊಲೀಸರು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ.

  ಆಗ್ರಾದ ಗುರುದ್ವಾರ ಗುರು ಕಾ ತಾಲ್ ಕ್ರಾಸಿಂಗ್ ಬಳಿ ಮಧ್ಯಾಹ್ನ 3.00 ರಿಂದ 4.00 ರ ನಡುವೆ ದುರ್ಘಟನೆ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತವಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

  ಇದನ್ನೂ ಓದಿ: ಪಬ್​ನಲ್ಲಿ ಪಾಕಿಸ್ತಾನ ಪರ ಘೋಷಣೆ; ಇಬ್ಬರು ಅರೆಸ್ಟ್​

  ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆಗ್ರಾದಿಂದ ಮಥುರಾ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ದುರ್ಘಟನೆ ಸಂಭವಿಸಿದೆ. ವೇಗವಾಗಿ ಬಮದ ಲಾರಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಐವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದು, ಆತನನ್ನು ಪತ್ತೆಹಚ್ಚಲು ತಂಡವನ್ನು ರಚಿಸಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  ಆಗ್ರಾದ ಗುರುದ್ವಾರ ಗುರು ಕಾ ತಾಲ್ ಬಳಿಯ ಕ್ರಾಸಿಂಗ್ ಇಂತಹ ಅಪಘಾತಗಳಿಗೆ ಹೆಚ್ಚು ಕುಖ್ಯಾತಿ ಪಡೆದಿದೆ. ಕ್ರಾಸಿಂಗ್​ ಬಳಿ ಅಂಡರ್​ಪಾಸ್​ ನಿರ್ಮಿಸುವಂತೆ ಸ್ಥಳೀಯರು ಹಲವಾರು ವರ್ಷಗಳಿಂದ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುತ್ತಿದ್ದು, ಈವರೆಗೂ ಯಾವುದೇ ಉಪಯೋಗವಾಗಿಲ್ಲ ಎಂದು ತಿಳಿದು ಬಂದಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts