22.5 C
Bengaluru
Sunday, January 19, 2020

ನೆಲಮಂಗಲದ ಬಳಿ ಭೀಕರ ಅಪಘಾತ: ಬಸ್ಸು ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಐವರ ದುರ್ಮರಣ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಬೆಂಗಳೂರು: ಯಂಟಗಾನಹಳ್ಳಿ ಬಳಿ ಸೋಮವಾರ ರಾತ್ರಿ ಸ್ಕಾರ್ಪಿಯೊ ಮತ್ತು ಕೆಎಸ್​ಆರ್​ಟಿಸಿ ಐರಾವತ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಒಂದೇ ಕುಟುಂಬದ ಐವರು ದುರ್ಮರಣಕ್ಕೀಡಾಗಿದ್ದಾರೆ.

ಪಂತರಪಾಳ್ಯ ನಿವಾಸಿ ಏಳುಮಲೈ (43), ಪತ್ನಿ ಕಮಲಾ (35), ಮಕ್ಕಳಾದ ಕಿರಣ್ (14), ಗಿರಿದೇವ್ (13) ಮತ್ತು ಗೀತಾ (10) ಮೃತರು.

ಶಿವರಾತ್ರಿ ಪ್ರಯುಕ್ತ ಏಳುಮಲೈ, ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಸೋಮವಾರ ಸಂಜೆ ಸ್ಕಾರ್ಪಿಯೊದಲ್ಲಿ ಆದಿಚುಂಚನಗಿರಿ ದೇವಾಲಯಕ್ಕೆ ತೆರಳಿದ್ದರು. ರಾತ್ರಿ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಯಂಟಗಾನಹಳ್ಳಿ 10.50ರಲ್ಲಿ ನಿಯಂತ್ರಣ ತಪ್ಪಿದ ಸ್ಕಾಪಿಯೊ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅದನ್ನು ದಾಟಿ ಬೆಂಗಳೂರಿನಿಂದ ಮಣಿಪಾಲ್​ಗೆ ಹೋಗುತ್ತಿದ್ದ ಐರಾವತ ಬಸ್​ಗೆ ಡಿಕ್ಕಿ ಹೊಡೆದಿದೆ. ಸ್ಕಾರ್ಪಿಯೊದಲ್ಲಿದ್ದ ಐವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಪ್ರಯಾಣಿಕರು ಪಾರು: ಬಸ್​ಗೆ ಹಠಾತ್ತನೆ ಸ್ಕಾರ್ಪಿಯೊ ಸಿಲುಕಿದ ಪರಿಣಾಮ ಬಸ್​ನ ಕ್ಲಚ್ ಜಾಮ್ ಆಗಿ ಸರ್ವೀಸ್ ರಸ್ತೆ ತಡೆಗೋಡೆ ದಾಟಿ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ಬಸ್​ನಲ್ಲಿದ್ದ 31 ಪ್ರಯಾಣಿಕರ ಪೈಕಿ ಚಾಲಕ ಹಾಗೂ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಏಳುಮಲೈ ಕಟ್ಟಡ ನಿರ್ವಣದ ಮೇಸ್ತ್ರಿಯಾಗಿದ್ದರು. ಪತ್ನಿ ಬಿಬಿಎಂಪಿ ಆರ್.ಆರ್. ನಗರ ಶಾಖೆಯಲ್ಲಿ ಪೌರ ಕಾರ್ವಿುಕಳಾಗಿದ್ದರು. ಖಾಸಗಿ ಶಾಲೆಯಲ್ಲಿ ಕಿರಣ್ 8ನೇ ತರಗತಿ, ಗಿರಿದೇವ್ 5ನೇ ಹಾಗೂ ಗೀತಾ 4ನೇ ತರಗತಿ ಓದುತ್ತಿದ್ದರು. ಪ್ರತಿಬಾರಿ ಶಿವರಾತ್ರಿಯಂದು ಭೇಟಿ ನೀಡುತ್ತಿದ್ದ ದೇವಾಲಯದ ಬಗ್ಗೆ ಏಳುಮಲೈ ಸಂಬಂಧಿಕರಿಗೆ ಮಾಹಿತಿ ನೀಡುತ್ತಿದ್ದರು. ಆದರೆ, ಈ ಬಾರಿ ತಿಳಿಸಿರಲಿಲ್ಲ. ಮೃತ ಕುಟುಂಬದ ಮಾಹಿತಿ ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡಬೇಕಾಯಿತು. ನಜ್ಜುಗುಜ್ಜಾಗಿದ್ದ ಮೊಬೈಲ್​ನಲ್ಲಿನ ಸಿಮ್ ಕಾರ್ಡ್ ತೆಗೆದು ಮತ್ತೊಂದು ಮೊಬೈಲ್​ಗೆ ಹಾಕಿ ಯಾರಾದರೂ ಕರೆ ಮಾಡುವರೆಂದು ಕಾಯಬೇಕಾಯಿತು. ಕೆಲ ಗಂಟೆ ನಂತರ ಬಂದ ಕರೆಯೊಂದರ ಆಧಾರದ ಮೇಲೆ ಮೃತರ ವಿವರ ಪತ್ತೆ ಹಚ್ಚಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...