ಅಂತ್ಯಕ್ರಿಯೆಗೆಂದು ಬಂದು ವಾಪಸ್‌ ತೆರಳುವಾಗ ಅಪಘಾತ: ಇಬ್ಬರು ಮಹಿಳೆ ಸೇರಿ ಆರು ಮಂದಿ ಸಾವು

ವಿಜಯಪುರ: ಟಾಟಾ ಏಸ್ ವಾಹನ ಪಲ್ಟಿಯಾಗಿ ಇಬ್ಬರು ಮಹಿಳೆಯರು ಸೇರಿ ಆರು ಜನರು ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುದ್ದೇಬಿಹಾಳ ತಾಲೂಕಿನ ಕಂದಗನೂರ ಬಳಿ ಅಪಘಾತ ಸಂಭವಿಸಿದ್ದು, ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಬಂದು ವಾಪಸ್ ಹೋಹುವಾಗ ಅವಘಡ ನಡೆದಿದೆ.

ಇಬ್ಬರು ಮಹಿಳೆಯರು, ಮೂವರು ಪುರುಷರು ಸೇರಿ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರು ಹಾಗೂ ಗಾಯಾಳುಗಳೆಲ್ಲರೂ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಹಳದೂರ ಗ್ರಾಮದ ನಿವಾಸಿಗಳು.
ಗಾಯಾಳುಗಳಿಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ.

ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *