More

    ಜಪಾನ್​ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

    ಜಪಾನ್ : ಹೊಸ ವರ್ಷದ ಮೊದಲ ದಿನವೇ ಜಪಾನ್​​ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.

    ಹವಾಮಾನ ಸಂಸ್ಥೆ ಪ್ರಕಾರ, ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ.  ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂ ಕಂಪನದ ಕೇಂದ್ರ ಬಿಂದು ವರದಿಯಾಗಿದೆ. 5 ಮೀಟರ್ ಎತ್ತರದ ಸುನಾಮಿ ಇಶಿಕಾವಾ ಪ್ರಿಫೆಕ್ಚರ್‌ನಲ್ಲಿ ನೋಟೊವನ್ನು ತಲುಪುತ್ತದೆ ಎಂದು ನಂಬಲಾಗಿದೆ.

    ಜಪಾನ್ ನ ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

    ಕಳೆದ ವರ್ಷ ಡಿಸೆಂಬರ್‌ನಲ್ಲಿ ಫಿಲಿಪೈನ್ಸ್‌ನಲ್ಲಿ ಭೂಕಂಪ ಸಂಭವಿಸಿತ್ತು, ಇದಕ್ಕೂ ಮೊದಲು ಕಳೆದ ವರ್ಷ ಡಿಸೆಂಬರ್‌ನಲ್ಲಿ ಫಿಲಿಪ್ಪೀನ್ಸ್‌ನಲ್ಲಿ ಭೂಕಂಪನದ ಅನುಭವವಾಗಿತ್ತು. ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 6.8 ಎಂದು ಅಳೆಯಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts