21.7 C
Bengaluru
Tuesday, January 21, 2020

ಶಿರೂರು, ಸಿದ್ದಾಪುರ ಪರಿಸರದಲ್ಲಿ 5 ಮಂಗ ಸಾವು

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

<ದೇಹ ಮಾದರಿ ಪ್ರಯೋಗಾಲಕ್ಕೆ ರವಾನೆ * ಜನರಲ್ಲಿ ಮಂಗನಕಾಯಿಲೆ ಭೀತಿ>

ಸಿದ್ದಾಪುರ/ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಎರಡು ದಿನಗಳಲ್ಲಿ ಒಟ್ಟು ಐದು ಮಂಗಗಳು ಮೃತಪಟ್ಟಿದ್ದು, ಪಕ್ಕದ ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಂಗನಕಾಯಿಲೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿದೆ.

ಸಿದ್ದಾಪುರ ರಥಬೀದಿ ಸಮೀಪ ಹಾಡಿಯಲ್ಲಿ ಮಂಗಳವಾರ ಒಂದು, ಬುಧವಾರ ಹೊಸಂಗಡಿ ಕೆಪಿಸಿ ಕಾಲನಿಯಲ್ಲಿ ಎರಡು ಹಾಗೂ ಶಿರೂರು-ಬೈಂದೂರು ಗಡಿಭಾಗದ ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಮೃತದೇಹ ಸಿಕ್ಕಿದೆ. ಎಲ್ಲ ಐದು ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಿ, ದೇಹದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬಳಿಕ ಮೃತದೇಹಗಳನ್ನು ದಫನ ಮಾಡಲಾಗಿದೆ. ಸತ್ತ ಮಂಗಗಳ ಕಿವಿಗಳಲ್ಲಿ ರಕ್ತ ಸೋರಿಕೆಯಾದ ಲಕ್ಷಣಗಳು ಕಂಡುಬಂದಿವೆ ಎಂಬ ಮಾಹಿತಿ ಲಭಿಸಿದೆ.

‘ಶಿರೂರಿನಲ್ಲಿ ಪತ್ತೆಯಾದ ಮಂಗದ ಒಂದು ಮೃತದೇಹ ಕೊಳೆತ ಸ್ಥಿತಿಯಲ್ಲಿತ್ತು. ಮಂಗಗಳ ಸಾವಿಗೆ ಮಂಗನಕಾಯಿಲೆಯೇ ಕಾರಣ ಎಂದು ಹೇಳಲಾಗದು. ಬೇರೆ ಕಾರಣಗಳು ಇರುವ ಸಾಧ್ಯತೆಗಳೂ ಇರುತ್ತವೆ’ ಎಂದು ತಾಲೂಕು ಆರೋಗ್ಯ ಕೇಂದ್ರದ ಅಧಿಕಾರಿ ನಾಗಭೂಷಣ್ ಉಡುಪ ತಿಳಿಸಿದ್ದಾರೆ. ಪಶುವೈದ್ಯಾಧಿಕಾರಿ ಶಂಕರ್ ಶೆಟ್ಟಿ ಪರಿಶೀಲಿಸಿದ್ದಾರೆ.

ಸಿದ್ದಾಪುರ ರಥಬೀದಿ ಸಮೀಪ ಮಂಗಳವಾರ ಮಂಗ ಸತ್ತಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಪಶು ಚಿಕಿತ್ಸಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದೀಕ್ಷಾ ಎನ್, ಕೀಟ ತಜ್ಞೆ ಡಾ.ಮುಕ್ತ, ಶಂಕರನಾರಾಯಣ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ.ದಿನಕರ ಶೆಟ್ಟಿ, ಸಿದ್ದಾಪುರ ಪಿಡಿಒ ಸತೀಶ್ ನಾಯ್ಕ, ಅರಣ್ಯ ಉಪ ವಲಯ ಅರಣ್ಯಾಧಿಕಾರಿ ವೀರಣ್ಣ ಮಾಯಾಚಾರ್, ಹರೀಶ್, ಅರಣ್ಯ ರಕ್ಷಕ ಆನಂದ ಬಳೆಗಾರ, ಅರಣ್ಯ ವೀಕ್ಷಕ ಸಂತೋಷ ಮತ್ತಿತರರು ಪರಿಶೀಲಿಸಿದ್ದಾರೆ.

ಹೊಸಂಗಡಿಯಲ್ಲಿ ಭೀತಿ: ಸಿದ್ದಾಪುರ ಸಮೀಪದ ಹೊಸಂಗಡಿ ಕೆಪಿಸಿ ವಸತಿ ಕಾಲನಿಯಲ್ಲಿ ಬುಧವಾರ ಬೆಳಗ್ಗೆ ಸುಮಾರು 6 ವರ್ಷದ ಎರಡು ಗಂಡು ಮಂಗಗಳ ಮೃತದೇಹ ಪತ್ತೆಯಾಗಿರುವ ಬಗ್ಗೆ ಸ್ಥಳೀಯರು ಪಂಚಾಯಿತಿಗೆ ಮಾಹಿತಿ ನೀಡಿದ್ದಾರೆ. ಗ್ರಾಪಂನಿಂದ ಪಶು ಚಿಕಿತ್ಸಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಹೊಸಂಗಡಿ ಗ್ರಾಪಂ ಅಧ್ಯಕ್ಷೆ ಯಶೋದಾ ಶೆಟ್ಟಿ, ಉಪಾಧ್ಯಕ್ಷ ಶ್ರೀಧರ್, ಪಿಡಿಒ ಗಿರೀಶ್‌ಕುಮಾರ ಶೆಟ್ಟಿ, ಕಾರ್ಯದರ್ಶಿ ಶಿವರಾಮ ಶೆಟ್ಟಿ, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗಭೂಷಣ, ಶಂಕರನಾರಾಯಣ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ. ದಿನಕರ ಶೆಟ್ಟಿ, ಕೆಪಿಸಿ ಇಲಾಖೆ ಆರೋಗ್ಯಾಧಿಕಾರಿ ಡಾ.ವಿಜಯಲಕ್ಷ್ಮಿ, ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ದೀಕ್ಷಾ ಎನ್, ಹಿರಿಯ ಆರೋಗ್ಯ ಸಹಾಯಕ ಶಿವಕುಮಾರ್, ಅರಣ್ಯಾಧಿಕಾರಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ಮಂಗಗಳ ದೇಹದ ಸ್ಯಾಂಪಲ್ ಪುಣೆ ಪ್ರಯೋಗಾಲಯಕ್ಕೆ ರವಾನೆ: ರಾಜ್ಯದಲ್ಲಿ ವೈರಸ್ ಪತ್ತೆ ಪ್ರಯೋಗಾಲಯ(ವಿಡಿಎಲ್) ಶಿವಮೊಗ್ಗದಲ್ಲಿ ಮಾತ್ರ ಇದ್ದು, ಅಲ್ಲಿನ ಕೀಟತಜ್ಞೆ ಡಾ. ಮುಕ್ತಾ ಅವರು ಸಿದ್ದಾಪುರ ರಥಬೀದಿ ಸಮೀಪ ಮಂಗಳವಾರ ಸಿಕ್ಕಿದ ಮಂಗನ ದೇಹದ ಸ್ಯಾಂಪಲ್ ಹಾಗೂ ಅಲ್ಲೇ ಆಸುಪಾಸಿನಲ್ಲಿದ್ದ ಉಣ್ಣೆಗಳನ್ನು ತಪಾಸಣೆಗೆ ಕೊಂಡೊಯ್ದಿದ್ದಾರೆ. ಬುಧವಾರ ಸತ್ತ ನಾಲ್ಕು ಮಂಗಗಳ ದೇಹದ ಭಾಗಗಳನ್ನು ಕೂಡ ಪರೀಕ್ಷೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಶಿವಮೊಗ್ಗ ಪ್ರಯೋಗಾಲಯದಲ್ಲಿ ಮನುಷ್ಯರ ಮಾದರಿ ಮಾತ್ರ ಪರೀಕ್ಷೆ ಮಾಡುವ ಸೌಲಭ್ಯ ಇದ್ದು, ಮಾದರಿಗಳನ್ನು ಮಂಗ, ಕೀಟ, ಪಕ್ಷಿಗಳ ಅಂಗಾಂಗಳನ್ನು ಪರೀಕ್ಷಿಸುವ ವ್ಯವಸ್ಥೆ ಇಲ್ಲ. ಹಾಗಾಗಿ ಮಹಾರಾಷ್ಟ್ರದ ಪುಣೆ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಮೂರ್ನಾಲ್ಕು ದಿನಗಳಲ್ಲಿ ವರದಿ ಲಭಿಸುವ ನಿರೀಕ್ಷೆ ಇದೆ ಎಂದು ಪ್ರಯೋಗಾಲಯದ ಮೂಲಗಳು ಹೇಳಿವೆ. ಕಿವಿ, ಹೃದಯ, ಶ್ವಾಸಕೋಶ, ಕರುಳು, ಮೆದುಳಿನ ಭಾಗ, ಮಂಗ ಸತ್ತು ಬಿದ್ದ ಪ್ರದೇಶದಲ್ಲಿದ್ದ ಉಣುಗುಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂತ್ರಸ್ತರಿಗೆ ಪರಿಹಾರ: ಸಾಗರ ತಾಲೂಕಿನಲ್ಲಿ ಮಂಗನ ಕಾಯಿಲೆಯಿಂದ ಮೃತರಾದ ರೋಗಿಗಳ ಕುಟುಂಬಗಳಿಗೆ ಪರಿಹಾರ ನೀಡುವಂತೆ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಆಗ್ರಹಿಸಿದ್ದಾರೆ.  ಸೋಮವಾರ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನು ಭೇಟಿ ಮಾಡಿದ ಅವರು, ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರು ನಂಬಿಕೆ ಕಳೆದುಕೊಂಡಿದ್ದಾರೆ. ಕಾಯಿಲೆ ಪೀಡಿತರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿ ಎಲ್ಲ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಮನವಿ ಮಾಡಲಾಗಿದೆ ಎಂದು ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನರಲ್ಲಿ ಆತಂಕ ಬೇಡ

ಸಿದ್ದಾಪುರ-ಶಿರೂರಿನಲ್ಲಿ ಸತ್ತ ಮಂಗಗಳ ಮೃತದೇಹದ ಸ್ಯಾಂಪಲ್‌ಗಳನ್ನು ತಪಾಸಣೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಜನರಿಗೆ ಯಾವುದೇ ಆತಂಕ ಬೇಡ. ಜ್ವರ ಬಾಧಿಸಿದರೆ ಕೂಡಲೇ ಸಮೀಪದ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು. 10-15 ದಿನಗಳಿಂದ ಹೆಚ್ಚು ದಿನ ಜ್ವರ ಇದ್ದರೆ ಹೆಚ್ಚಿನ ನಿಗಾ ವಹಿಸಬೇಕು. ಜನರು ಕಾಡಿಗೆ ಹೋಗುವಾಗ ಮುನ್ನೆಚ್ಚರಿಕೆ ವಹಿಸಬೇಕು. ಕಾಯಿಲೆ ಬರಬಹುದು ಎಂಬ ಕಾರಣಕ್ಕೆ ಮಂಗಗಳನ್ನು ಸಾಯಿಸಬಾರದು.
| ಡಾ.ರೋಹಿಣಿ, ಉಡುಪಿ ಜಿಲ್ಲಾಸ್ಪತ್ರೆ ಆರೋಗ್ಯಾಧಿಕಾರಿ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...