

ರಾಯ್ಪುರ: ಗೂಡ್ಸ್ ವಾಹನವೊಂದು (Goods Vehicle) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಛತ್ತೀಸ್ಗಢದ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಎಎಸ್ಪಿ ಮಹೇಶ್ವರ್ ನಾಗ್ ಮಾತನಾಡಿ, 45 ಜನರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ವಾಹನವೊಂದುದರ್ಭಾ ಪೊಲೀಸ್ ಠಾಣೆ ವ್ಯಾಪ್ತಿಯ ಚಂದಮೇಟಾ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಿಆರ್ಪಿಎಫ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಎಎಸ್ಪಿ ಮಹೇಶ್ವರ್ ನಾಗ್ ತಿಳಿಸಿದ್ದಾರೆ.
ವೈದ್ಯಾಧಿಕಾರಿ ದಿಲೀಪ್ ಕಶ್ಯಪ್ ಮಾತನಾಡಿ, 30ಕ್ಕೂ ಅಧಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 4 ಜನರು ಸ್ಥಳದಲ್ಲೇ ಮೃತಪಟ್ಟರೆ ಓಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪಘಾತದಲ್ಲಿ 81 ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವೈದ್ಯಾಧಿಕಾರಿ ದಿಲೀಪ್ ಕಶ್ಯಪ್ ಮಾಹಿತಿ ನೀಡಿದ್ದಾರೆ.