ಶಿವಮೊಗ್ಗದಲ್ಲಿ ಕಾರು-ಲಾರಿ ಡಿಕ್ಕಿ: ಸ್ಥಳದಲ್ಲೇ ಮಗು ಸೇರಿ ಐವರ ಸಾವು

ಶಿವಮೊಗ್ಗ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಗು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಚಿಕ್ಕದಾನನಂದಿ ಗ್ರಾಮದ ಬಳಿ ಮಂಗಳವಾರ ಅಪಘಾತ ನಡೆದಿದೆ. ಅಪಘಾತದಲ್ಲಿ ಸ್ವಿಫ್ಟ್​ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಕಾರ್​ನೊಳಗೆ ಸಿಲುಕಿಕೊಂಡಿವೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *