More

  ಬಸ್- ಶಾಲಾ ವ್ಯಾನ್ ಮುಖಾಮುಖಿ ಡಿಕ್ಕಿ; 6 ಮಂದಿ ಶಾಲಾ ವಿದ್ಯಾರ್ಥಿಗಳು ಸಾವು

  ಉತ್ತರಪ್ರದೇಶ: ಶಾಲಾ ವ್ಯಾನ್‌, ಬಸ್ ಮುಖಾಮುಖಿಯಾಗಿ​​ ಡಿಕ್ಕಿಯಾದ ರಭಸಕ್ಕೆ ಶಾಲಾ ವ್ಯಾನ್ ಚಾಲಕ ಹಾಗೂ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ 16 ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಉತ್ತರ ಪ್ರದೇಶದ ಬುಡೌನ್‍ನಲ್ಲಿ ನಡೆದಿದೆ.

  ಅಪಘಾತದ ನಂತರ ಗಾಯಗೊಂಡ ಸುಮಾರು 16 ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕಿತ್ಸೆ ವೇಳೆ 6 ಮಂದಿ ಮೃತಪಟ್ಟಿದ್ದು, ಚಾಲಕನೂ ಸೇರಿ  ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಖಾಸಗಿ ಶಾಲೆಯ ವಾಹನ ವಿದ್ಯಾರ್ಥಿಗಳನ್ನು ಇಂದು ಬೆಳಗ್ಗೆ ಶಾಲೆಗೆ ಕರೆದೊಯ್ಯುವ ವೇಳೆ ಈ ಅಪಘಾತ ಸಂಭವಿಸಿದೆ. ಉಸಾವನ್ ಪೊಲೀಸ್ ಠಾಣೆಯ ಅಧಿಕಾರಿಗಳು ವಿಷಯ ತಿಳಿದುಕೊಂಡಿದ್ದಾರೆ.

  ಅಪಘಾತದ ಬಗ್ಗೆ ಮಾಹಿತಿ ಪಡೆದು ಜಿಲ್ಲಾಸ್ಪತ್ರೆಗೆ ಆಗಮಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮನೋಜ್ ಕುಮಾರ್, ಪ್ರಾಥಮಿಕ ಸಾವುಗಳನ್ನು ಖಚಿತಪಡಿಸಿದ್ದಾರೆ. ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆಸ್ಪತ್ರೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

  ನಿಖರವಾದ ಸಂದರ್ಭಗಳು ಮತ್ತು ಅಪಘಾತದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಈ ವಿಷಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಇತ್ತ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

  VIDEO | ಮರಾಠಾ ಮೀಸಲಾತಿ ಕಿಚ್ಚು; ಶಾಸಕನ ಮನೆ ಮೇಲೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts