More

    ವಂದೇ ಭಾರತ್ ರೈಲಿಗೆ ಕಲ್ಲೆಸೆದರೆ 5 ವರ್ಷ ಜೈಲು! ಕಠಿಣ ಕ್ರಮಕ್ಕೆ ಮುಂದಾದ ರೈಲ್ವೇ ಇಲಾಖೆ

    ನವದೆಹಲಿ: ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದರೆ, ಅಂತಹವರನ್ನು ಐದು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು. ರೈಲುಗಳಿಗೆ ಕಲ್ಲೆಸೆಯುವುದ ಅಪರಾಧ. ಕೃತ್ಯ ಎಸಗಿದವರನ್ನು ಸೆಕ್ಷನ್ 153 ರೈಲ್ವೇ ಆ್ಯಕ್ಟ್ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ದಕ್ಷಿಣ ರೈಲ್ವೆ(South Central Railway) ಆದೇಶ ಹೊರಡಿಸಿದೆ.

    ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ದಕ್ಷಿಣ ರೈಲ್ವೇ ಸಾರ್ವಜನಿಕರಲ್ಲಿ ಮನವಿ ಮಾಡಿ, ಎಚ್ಚರಿಕೆ ನೀಡಿದೆ. ವಂದೇ ಭಾರತ್ ರೈಲಿಗೆ ಕಲ್ಲೆಸೆದು ಹಾನಿಯುಂಟು ಮಾಡುವ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಇತ್ತೀಚೆಗೆ ದಿನಗಗಳಲ್ಲಿ 9 ಪ್ರಕರಣಗಳು ವರದಿಯಾಗಿವೆ. ಈ ನಿಟ್ಟಿನಲ್ಲಿ ತಪ್ಪಿತಸ್ಥರ ವಿರುದ್ಧ ರೈಲ್ವೇ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

    ಇದನ್ನೂ ಓದಿ: ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ

    ತಲೆಂಗಾಣ, ಬಿಹಾರ, ಉತ್ತರಪ್ರದೇಶ, ಛತ್ತೀಸ್​ಗಢ ರಾಜ್ಯಗಳಲ್ಲಿ ವಂದೇ ಭಾರತ್ ರೈಲಿಗೆ ಕಲ್ಲೆಸೆದು ಹಾನಿಯುಂಟು ಮಾಡಿದ ಪ್ರಕರಣಗಳು ಹೆಚ್ಚು ದಾಖಲಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ರಕ್ಷಣಾ ಪಡೆ(ಆರ್‌ಪಿಎಫ್) ಈಗಾಗಲೇ 39 ಅಪರಾಧಿಗಳನ್ನು ಬಂಧಿಸಿದೆ.

    ರೈಲ್ವೇ ಸಂರಕ್ಷಣಾ ಪಡೆ (ಆರ್‌ಪಿಎಫ್) ಈಗಾಗಲೇ ಅಭಿಯಾನಗಳನ್ನು ಮಾಡುತ್ತಿವೆ. ರೈಲುಗಳಿಗೆ ಕಲ್ಲೆಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ. ಜತೆಗೆ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಬೇಕಾದಂತಹ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ದಕ್ಷಿಣ ರೈಲ್ವೇ ಇಲಾಖೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಿ.ಎಚ್.ರಾಕೇಶ್ ತಿಳಿಸಿದ್ದಾರೆ. (ಏಜೆನ್ಸೀಸ್)

    ಇದನ್ನೂ ಓದಿ: ರಾಜ್ಯದಲ್ಲಿ ಕಮಲ ಅರಳುವ ದಿನಾಂಕ ನಿಶ್ಚಯವಾಗಿದೆ! ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಟ್ವೀಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts