50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಹುಬ್ಬಳ್ಳಿ: ಆಪರೇಷನ್ ಕಮಲ ವಿರೋಧಿಸಿ ಚಿಟಗುಪ್ಪಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಯಿತು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ನಡೆಸಿದ ಕಾರ್ಯರ್ತರು ಚಿಟಗುಪ್ಪಿ ಆಸ್ಪತ್ರೆ ಬಳಿ ರಸ್ತೆತಡೆ ನಡೆಸಿ ಪ್ರತಿಭಟಿಸುತ್ತಿದ್ದರು. ಪೊಲೀಸರ ಮಾತಿಗೆ ಬಗ್ಗದ ಹಿನ್ನೆಲೆಯಲ್ಲಿ ಕೈ ಕಾರ್ಯಕರ್ತರನ್ನು ಬಂಧಿಸಿ ಸಿಎಆರ್ ಮೈದಾನಕ್ಕೆ ಕಳುಹಿಸಲಾಗಿದೆ.

ನಾಳೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಪ್ರತಿಭಟನೆ ಬಿಸಿ ಹೆಚ್ಚಾಗಿತ್ತು.