More

    50 ಹಾಸಿಗೆಯುಳ್ಳ ಕೋವಿಡ್ ಆಸ್ಪತ್ರೆ ಉದ್ಘಾಟನೆ

    ಶಿಗ್ಗಾಂವಿ: ಕೋವಿಡ್ ರೋಗಿಗಳಿಗೆ ತೊಂದರೆಯಾಗದಂತೆ ಚಿಕಿತ್ಸೆ ನೀಡುವ ಉದ್ದೇಶದಿಂದ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ 50 ಹಾಸಿಗೆ ವ್ಯವಸ್ಥೆಯುಳ್ಳ ಕೋವಿಡ್ ಆಸ್ಪತ್ರೆ ಆರಂಭಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

    ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಕೇರ್ ಆಸ್ಪತ್ರೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

    ಆಸ್ಪತ್ರೆಗೆ 3 ವೆಂಟಿಲೇಟರ್​ಗಳನ್ನು ಪೂರೈಕೆ ಮಾಡಿದ್ದು, ಇನ್ನೂ 7 ವೆಂಟಿಲೇಟರ್​ಗಳನ್ನು ಶೀಘ್ರ ಪೂರೈಸಲಾಗುವುದು. ಈಗಾಗಲೇ ಸವಣೂರಿನಲ್ಲಿ 30 ಹಾಸಿಗೆ ಆಸ್ಪತ್ರೆ ಆರಂಭಿಸಲಾಗಿದೆ. ಶೀಘ್ರದಲ್ಲೇ 50 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಅಲ್ಲದೆ, ಬಂಕಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ 30 ಹಾಸಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಅದರೊಂದಿಗೆ ಮೂರು ಆಸ್ಪತ್ರೆಗೆ ಕೋವಿಡ್ ಚಿಕಿತ್ಸೆಗೆ ಉಪಕರಣಗಳನ್ನು ವಿತರಿಸಲಾಗುವುದು ಎಂದರು.

    ಸಂಸದ ಶಿವಕುಮಾರ ಉದಾಸಿ, ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಡಿಸಿ ಸಂಜಯ ಶೆಟ್ಟೆಣ್ಣವರ, ಜಿಪಂ ಸಿಇಒ ರಮೇಶ ದೇಸಾಯಿ, ಎಸ್ಪಿ ದೇವರಾಜ, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡೆ, ಎಸಿ ಅನ್ನಪೂರ್ಣ ಮುದಕಮ್ಮನವರ, ವೈದ್ಯಾಧಿಕಾರಿ ಪಿ.ಎಚ್. ಹನುಮಂತಪ್ಪ, ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ, ಡಾ.ವಿವೇಕ ಜೈನಕೇರಿ, ಡಾ.ಮಹೇಶ ಜಗದವರ, ಡಾ.ಸುಭಾಸ ಲೋಕ್ರೆ, ಬಿಜೆಪಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts