More

    ಮೃತರ ಕುಟುಂಬಕ್ಕೆ 50 ಸಾವಿರ ರೂ. ನೆರವು

    ಹಿರೇಕೆರೂರ: ಹಿರೇಕೆರೂರ ವಿಧಾನಸಭಾ ಕ್ಷೇತ್ರದ ಬಡತನ ರೇಖೆಗಿಂತ ಕಡಿಮೆ ಇರುವ ಕುಟುಂಬದ ಸದಸ್ಯರು ಕೋವಿಡ್ ಸೋಂಕು ತಗುಲಿ ಮೃತಪಟ್ಟವರ ಕುಟುಂಬಕ್ಕೆ ವೈಯುಕ್ತಿಕವಾಗಿ 50 ಸಾವಿರ ರೂಪಾಯಿ ನೀಡಲಾಗುವುದು ಕೃಷಿ ಸಚಿವ ಬಿ.ಸಿ. ಪಾಟೀಲ ಘೊಷಿಸಿದರು.

    ಪಟ್ಟಣದ ಗೃಹ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರೊನಾ 2ನೇ ಅಲೆ ತಾಲೂಕಿನಲ್ಲಿ ಭಾರಿ ಸಾವು-ನೋವು ಉಂಟು ಮಾಡುತ್ತಿದೆ. ವಿಧಾನಸಭಾ ಕ್ಷೇತ್ರದಲ್ಲಿ ಕರೊನಾ ಸೋಂಕು ತಗುಲಿದ ಬಿಪಿಎಲ್ ಕಾರ್ಡ್ ಹೊಂದಿದದವರು ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಅದರ ಸಂಪೂರ್ಣ ವೆಚ್ಚ ವೈಯುಕ್ತಿಕವಾಗಿ ಭರಿಸುವ ಘೊಷಣೆ ಮಾಡಿದ್ದು, ಈ ಪ್ರಕ್ರಿಯೆ ಜಾರಿಯಲ್ಲಿದೆ. ಅನೇಕ ಬಿಪಿಎಲ್ ಪಡಿತರ ಚೀಟಿ ಹೊಂದಿದ ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದರು.

    ರಟ್ಟಿಹಳ್ಳಿ, ಹಿರೇಕೆರೂರ ತಾಲೂಕಿನ ಬಡತನ ರೇಖೆಗಿಂತ ಕಡಿಮೆ ಇರುವ ಕುಟುಂಬದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟರೆ ಅಂತಹ ಪ್ರತಿ ಕುಟುಂಬದ ಮನೆ ಬಾಗಿಲಿಗೆ ಹೋಗಿ 50 ಸಾವಿರ ರೂಪಾಯಿ ನೀಡಲಾಗುವುದು. ಕ್ಷೇತ್ರದಲ್ಲಿ ಇಲ್ಲಿಯವರೆಗೆ 18 ಜನ ಕರೊನಾ ಸೋಂಕಿನಿಂದ ಮೃತಪಟ್ಟಿದ್ದು, ಮೇ 17ರಂದು ಅವರ ಮನೆ ಬಾಗಿಲಿಗೆ ಹೋಗಿ ತಲಾ 50 ಸಾವಿರ ರೂಪಾಯಿ ನೀಡುವ ಮೂಲಕ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತೇನೆ. ಯಾರೂ ಕರೊನಾ ಬಗ್ಗೆ ಭಯಪಡಬಾರದು. ಆದರೆ, ನಿರ್ಲಕ್ಷ್ಯ ವಹಿಸುವಂತಿಲ್ಲ. ಈ ಮಹಾಮಾರಿ ದಿನದಿಂದ ದಿನಕ್ಕೆ ಭೀಕರ ಪರಿಣಾಮ ಬೀರುತ್ತಿದ್ದು, ಸೋಂಕಿತರು ಹೋಮ್ ಐಸೋಲೇಷನ್ ಬದಲು ಕೋವಿಡ್ ಕೇಂದ್ರಗಳಲ್ಲಿ ದಾಖಲಾಗಿ ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಬೇಕು. ಸೋಂಕಿನ ಬಗ್ಗೆ ಹೆಚ್ಚಿನ ಮುಂಜಾಗ್ರತೆ ವಹಿಸುವ ಮೂಲಕ ಮನೆ ಮತ್ತು ಗ್ರಾಮ, ರಾಜ್ಯ ಸೇರಿದಂತೆ ದೇಶ ಕಾಪಾಡಬೇಕಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts