More

    533 ಶಾಲಾ ಕೊಠಡಿಗೆ ಅನುದಾನ ಮಂಜೂರು

    ಚಿಕ್ಕೋಡಿ, ಬೆಳಗಾವಿ: 2022-23ನೇ ಸಾಲಿನಲ್ಲಿ ರಾಜ್ಯ ವಲಯ ಮತ್ತು ಮುಂದುವರಿದ ಕಾರ್ಯಕ್ರಮದ ವಿವೇಕ ಯೋಜನೆಯಡಿ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ 533 ಕೊಠಡಿ ನಿರ್ಮಿಸಲು ಅನುದಾನ ಮಂಜೂರು ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಸಭೆ ಅಧಿವೇಶನದಲ್ಲಿ ರಾಯಬಾಗ ಶಾಸಕ ಡಿ.ಎಂ.ಐಹೊಳೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.

    ರಾಜ್ಯದಲ್ಲಿ 990 ಕೋಟಿ ರೂ. ವೆಚ್ಚದಲ್ಲಿ 6,601 ಶಾಲಾ ಕೊಠಡಿ ನಿರ್ಮಿಸಲಾಗುತ್ತಿದ್ದು, ಇದರಲ್ಲಿ 533 ಕೊಠಡಿಗಳು ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಮಂಜೂರಾಗಿವೆ. ಕೊಠಡಿಗಳ ದುರಸ್ತಿಗೆ 5.4 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 41,876 ಹಾಗೂ ಪ್ರೌಢ ಶಾಲೆಗಳಲ್ಲಿ 8,455 ಶಿಕ್ಷಕ ಕೊರತೆಯಿದೆ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ವಿವಿಧ ವೃಂದಗಳ ಒಟ್ಟು 2,500 ಶಿಕ್ಷಕರನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸೂಚಿಸಲಾಗಿದೆ ಎಂದು ಶಾಸಕರ ಪ್ರಶ್ನೆಗೆ ಉತ್ತರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts