More

    545 ಎಸ್‌ಐ ನೇಮಕಾತಿಗೆ ಮರು ಪರೀಕ್ಷೆ; ಪರೀಕ್ಷೆ ಕ್ರಮ, ಪಠ್ಯದಲ್ಲಿ ಬದಲಾವಣೆ ಇಲ್ಲ ಕೆಇಎ ಸ್ಪಷ್ಟನೆ

    ಬೆಂಗಳೂರು: ಸಬ್‌ಇನ್ಸ್‌ಪೆಕ್ಟರ್ 545 ಹುದ್ದೆಗಳ ನೇಮಕಾತಿಗೆ ಮರುಪರೀಕ್ಷೆ ನಡೆಸಲು ಉದ್ದೇಶಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ‘ಪಠ್ಯಕ್ರಮ’ದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

    ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದು ಎಸ್‌ಐ ಹುದ್ದೆಗಳ ನೇಮಕಾತಿ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ಸೂಚನೆ ಮೇರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮರು ಪರೀಕ್ಷೆ ನಡೆಸುವ ಜವಾಬ್ದಾರಿ ನೀಡಲಾಗಿದೆ. ಡಿ.23ಕ್ಕೆ ಪರೀಕ್ಷೆ ನಿಗದಿ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ಹಾಗೂ ಪಠ್ಯಕ್ರಮದಲ್ಲಿ ಬದಲಾವಣೆ ಇರುವುದಿಲ್ಲ. ಈ ಹಿಂದೆ ಪೊಲೀಸ್ ನೇಮಕಾತಿ ನಡೆಸಿದ್ದ ಕ್ರಮದಲ್ಲಿಯೇ ಪರೀಕ್ಷೆ ನಡೆಯಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

    ಇದರ ನಡುವೆ ಓದಲು ಸಮಯ ನೀಡದೆ ಒಂದು ತಿಂಗಳ ಅವಧಿಯಲ್ಲಿ ಪರೀಕ್ಷೆ ನಡೆಸಲು ಕೆಇಎ ಮುಂದಾಗಿರುವುದು ಸರಿಯಲ್ಲ. ೆಬ್ರವರಿ ಅಥವಾ ಮಾರ್ಚ್‌ನಲ್ಲಿ ಪರೀಕ್ಷೆ ನಡೆಸಬೇಕೆಂದು ಒತ್ತಾಯ ಕೇಳಿಬಂದಿದ್ದವು. ಇದನ್ನು ಕೆಇಎ ನಿರಾಕರಿಸಿದೆ.

    ಪೊಲೀಸ್ ನೇಮಕಾತಿ ವಿಭಾಗ ನೀಡಿದ್ದ ಕೇಂದ್ರ ಲೋಸೇವಾ ಆಯೋಗ (ಯುಪಿಎಸ್‌ಸಿ) ಮಾದರಿ ಪ್ರಶ್ನೆ ಪತ್ರಿಕೆ ನೀಡಬೇಕೆಂದು ಅಭ್ಯರ್ಥಿಗಳಿಂದ ಕೂಗು ಕೇಳಿಬಂದಿದೆ. ಜತೆಗೆ ಪಾರದರ್ಶಕವಾಗಿ ಪರೀಕ್ಷೆ ನಡೆಸಿ ಅರ್ಹರಿಗೆ ನ್ಯಾಯ ಒದಗಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts