551 ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳು

oxygen
Published on

ನವದೆಹಲಿ : ಕರೊನಾ ಹೆಚ್ಚಳದಿಂದ ತಲೆದೋರುತ್ತಿರುವ ಮೆಡಿಕಲ್ ಆಕ್ಸಿಜನ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ 551 ಆಕ್ಸಿಜನ್ ಜನರೇಷನ್ ಪ್ಲ್ಯಾಂಟ್​ಗಳನ್ನು ದೇಶಾದ್ಯಂತ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದ ವಿವಿಧೆಡೆ 551 ಪ್ರೆಷರ್​ ಸ್ವಿಂಗ್​ ಅಬ್​ಸಾರ್ಪ್​ಷನ್ ಆಕ್ಸಿಜನ್ ಜನರೇಷನ್ ಪ್ಲ್ಯಾಂಟ್​ಗಳನ್ನು ಸ್ಥಾಪಿಸಲಾಗುವುದು. ಈ ಘಟಕಗಳು ಜಿಲ್ಲಾ ಕೇಂದ್ರಗಳಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ ಕಾರ್ಯ ಆರಂಭಿಸಲಿವೆ. ಇದರಿಂದ ಜಿಲ್ಲಾ ಕೇಂದ್ರಗಳಲ್ಲಿನ ಆಸ್ಪತ್ರೆಗಳಿಗೆ ತಡೆರಹಿತ ಆಮ್ಲಜನಕ ಪೂರೈಕೆ ನಡೆಯುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net