More

    ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿಥಿಲಾವಸ್ಥೆ ತಲುಪಿದ 57 ಅಂಗನವಾಡಿ ಕಟ್ಟಡಗಳು, ಜೀವಭಯದಲ್ಲೇ ಕಂದಮ್ಮಗಳ ಆಟ-ಪಾಠ

    ರಾಜೇಂದ್ರ ಶಿಂಗನಮನೆ ಶಿರಸಿ

    ಉತ್ತರ ಕನ್ನಡ ಜಿಲ್ಲೆಯ 57 ಅಂಗನವಾಡಿ ಕಟ್ಟಡಗಳು ಶಿಥಿಲಾವಸ್ಥೆ ತಲುಪಿದ್ದು, ಜೀವ ಭಯದ ನಡುವೆ ಕಂದಮ್ಮಗಳ ಆಟ ಪಾಠ ಸಾಗಿದೆ.

    ಜಿಲ್ಲೆಯಲ್ಲಿ 1500ಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳು ಇದ್ದು, 30 ಸಾವಿರಕ್ಕೂ ಹೆಚ್ಚು ಮಕ್ಕಳು ಫಲಾನುಭವಿಗಳಾಗಿದ್ದಾರೆ. ಇವುಗಳಲ್ಲಿ ಜಿಲ್ಲೆಯ ವಿವಿಧೆಡೆ 57 ಅಂಗನವಾಡಿಗಳು ಶಿಥಿಲ ಕಟ್ಟಡಗಳಲ್ಲಿ ನಡೆಯುತ್ತಿದ್ದು, ಜೀವ ಭಯದ ನಡುವೆ ಮಕ್ಕಳ ಪಾಠ ಸಾಗಿದೆ.

    ಅಂಗನವಾಡಿ ಸ್ವಂತ ಕಟ್ಟಡಗಳು ನಿರ್ವಣವಾಗಿ ದಶಕಗಳೇ ಕಳೆದಿದ್ದು, ಗೋಡೆಗಳು ಬಿರುಕು ಬಿಟ್ಟಿವೆ. ಹಲವೆಡೆ ಕಟ್ಟಡಗಳ

    ಮೇಲ್ಛಾವಣಿ ಉದುರುತ್ತಿದ್ದು, ತುಂತುರು ಮಳೆ ಬಂದರೂ ಕಟ್ಟಡಗಳು ಸೋರುತ್ತವೆ.

    ಗೋಡೆಗಳಿಗೆ ಬಣ್ಣ ಬಳಿದು ವರ್ಷಗಳೇ ಕಳೆದಿದ್ದು, ಯಾವುದೇ ಕ್ಷಣದಲ್ಲಿ ಬೀಳುವ ಸ್ಥಿತಿಗೆ ತಲುಪಿವೆ. ಸುರಕ್ಷತೆ ಕಾರಣಕ್ಕೆ ಪಾಲಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದು, ವರ್ಷದಿಂದ ವರ್ಷಕ್ಕೆ ಮಕ್ಕಳ ದಾಖಲಾತಿ ಕುಸಿಯುತ್ತಿದೆ.

    ಅಂಗನವಾಡಿಗಳ ಮೇಲ್ವಿಚಾರಣೆಯ ಹೊಣೆ ಹೊತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಭಾಗ್ಯ ಕಲ್ಪಿಸಲು ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಸಿದ್ದಾರೆ. ಸರ್ಕಾರಕ್ಕೆ ಮೇಲಿಂದ ಮೇಲೆ ಪತ್ರ ಬರೆದು ಹೊಸ ಕಟ್ಟಡಗಳ ನಿರ್ವಣಕ್ಕೆ ಅನುದಾನ ಕೋರುತ್ತಿದ್ದಾರೆ. ಆದರೆ, ಜಿಲ್ಲೆಯ ಬೇಡಿಕೆಗೆ ತಕ್ಕಂತೆ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡದ ಕಾರಣ ಎಲ್ಲ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ವಿುಸುವ ಕನಸು ನನಸಾಗಿಲ್ಲ.

    ಪ್ರತ್ಯೇಕ ಬಾಡಿಗೆ: ಅಧಿಕಾರಿಗಳು ಅನಿವಾರ್ಯವಾಗಿ 299 ಖಾಸಗಿ ಕಟ್ಟಡಗಳನ್ನು ಬಾಡಿಗೆಗೆ ಪಡೆದು ಅಂಗನವಾಡಿ ನಡೆಸುತ್ತಿದ್ದಾರೆ. ನಗರ ಮತ್ತು ಗ್ರಾಮೀಣ ಭಾಗಕ್ಕೆ ಸರ್ಕಾರ ಪ್ರತ್ಯೇಕ ಬಾಡಿಗೆ ದರ ನಿಗದಿಪಡಿಸಿದ್ದು, ಇಲಾಖೆ ಅನುದಾನ ಬಾಡಿಗೆ ರೂಪದಲ್ಲಿ ಖಾಸಗಿ ಕಟ್ಟಡ ಮಾಲೀಕರ ಜೇಬು ಸೇರುತ್ತಿದೆ.

    ಗ್ರಾಮೀಣ ಪ್ರದೇಶದಲ್ಲಿ 1 ಸಾವಿರ ಮತ್ತು ನಗರ ಪ್ರದೇಶದಲ್ಲಿ 4 ಸಾವಿರ ರೂ. ಬಾಡಿಗೆ ನಿಗದಿಪಡಿಸಲಾಗಿದೆ. ವಿದ್ಯುತ್, ಕುಡಿಯುವ ನೀರಿನ ಸೌಲಭ್ಯ, ಸ್ವಚ್ಛತಾ ಕಾರ್ಯದ ನಿರ್ವಹಣೆಗೆ ಇಲಾಖೆಯು ಪ್ರತ್ಯೇಕ ಹಣ ಕೊಡುವುದಿಲ್ಲ. ಶಿಥಿಲ ಕಟ್ಟಡ ಹಾಗೂ ಬಾಡಿಗೆ ಕಟ್ಟಡಗಳ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಪ್ರತಿ ವರ್ಷದ ಬಜೆಟ್​ನಲ್ಲಿ ಹಂತಹಂತವಾಗಿ ಹಣ ಬಿಡುಗಡೆಯಾಗುತ್ತದೆ. ಬಹುತೇಕ ಅಂಗನವಾಡಿಗಳಿಗೆ ಸರ್ಕಾರಿ ಜಾಗ ಗುರುತಿಸಿ ಪ್ರಸ್ತಾವ ಸಲ್ಲಿಸಲಾಗಿದೆ. | ಶ್ಯಾಮಲಾ ಸಿ.ಕೆ ಡಿಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts