More

    ಮಣಿಪಾಲ್ ಇನ್ಸ್​ಟಿಟ್ಯೂಟ್​ನಲ್ಲಿ 59 ವಿದ್ಯಾರ್ಥಿಗಳಿಗೆ ಕರೊನಾ… ಕಂಟೇನ್​ಮೆಂಟ್ ಜೋನ್ ಘೋಷಣೆ

    ಮಣಿಪಾಲ: ಕರ್ನಾಟಕದ ಮಣಿಪಾಲ್ ಇನ್ಸ್​​ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂಐಟಿ)ಯ 59 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಸನ್ನಿವೇಶದ ಹಿನ್ನೆಲೆಯಲ್ಲಿ ಎಂಐಟಿ ಕ್ಯಾಂಪಸ್​​ಅನ್ನು ಕಂಟೇನ್​ಮೆಂಟ್ ಜೋನ್ ಆಗಿ ಘೋಷಿಸಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

    ಈ ನಿಟ್ಟಿನಲ್ಲಿ ಕರೊನಾ ಪ್ರೊಟೋಕಾಲ್​ಅನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಸೋಂಕಿತ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿರಿಸುವ, ಮತ್ತು ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಟ್ರೇಸ್ ಮಾಡಿ ಪರೀಕ್ಷಿಸುವ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

    ಇದನ್ನೂ ಓದಿ: ಹುಟ್ಟಿದ ಮಗುವಿನಲ್ಲಿ ಕರೊನಾ ಆ್ಯಂಟಿಬಾಡೀಸ್ ಪತ್ತೆ !

    ಮಾರ್ಚ್ 17 ರಂದು ಕರ್ನಾಟಕದಲ್ಲಿ 1,275 ಹೊಸ ಕರೊನಾ ಪ್ರಕರಣಗಳು ವರದಿಯಾಗಿದ್ದು, 4 ಕರೊನಾ ಸಂಬಂಧೀ ಸಾವುಗಳು ಸಂಭವಿಸಿವೆ. ಬೆಂಗಳೂರು ನಗರ ಪ್ರದೇಶದಲ್ಲೇ 786 ಪ್ರಕರಣಗಳು ವರದಿಯಾಗಿದ್ದು, ಸೋಂಕಿನ ಪ್ರಮಾಣ ಹೆಚ್ಚದಂತೆ ಕಟ್ಟುನಿಟ್ಟಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ರಾಜ್ಯ ಸರ್ಕಾರ ಸೂಚಿಸಿದೆ. (ಏಜೆನ್ಸೀಸ್)

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    “18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕರೊನಾ ಲಸಿಕೆ ನೀಡಿ” : ಕೇಜ್ರಿವಾಲ್

    ಜಾತಕ ದೋಷ ನಿವಾರಿಸಲು 13 ವರ್ಷದ ವಿದ್ಯಾರ್ಥಿಯನ್ನು ‘ಮದುವೆ’ಯಾದ ಶಿಕ್ಷಕಿ !

    ನಿಯಮ ಪಾಲಿಸದ ಪ್ರಯಾಣಿಕರನ್ನು ಕೆಳಗಿಳಿಸಿದ ಏರ್ ಏಷಿಯಾ; ಮಾಸ್ಕ್ ಸರಿಯಾಗಿ ಧರಿಸದ 6 ಪ್ರಯಾಣಿಕರು ಭದ್ರತಾ ಪಡೆ ವಶಕ್ಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts