More

    ಇಂಗ್ಲೆಂಡ್​​ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಗೆಲುವು! ಸರಣಿ ಕೈವಶ ಮಾಡಿಕೊಂಡ ರೋಹಿತ್​ ಪಡೆ

    ಧರ್ಮಶಾಲಾ: ಇಲ್ಲಿನ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಹಾಗೂ 64 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ.

    ಇದನ್ನೂ ಓದಿ: ಗ್ಯಾರಂಟಿ ಏನೆಂಬುದನ್ನು ಅರುಣಾಚಲದಲ್ಲಿ ಬಂದು ನೋಡಿ: ವಿಪಕ್ಷಗಳನ್ನು ಕುಟುಕಿದ ಪ್ರಧಾನಿ ಮೋದಿ!

    ಕೊನೆ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ 218 ರನ್‌ಗಳಿಗೆ ಉತ್ತರವಾಗಿ ಭಾರತ ಮೊದಲ ಇನಿಂಗ್ಸ್‌ನಲ್ಲಿ 477 ರನ್ ಗಳಿಸಿತ್ತು. ಇದರೊಂದಿಗೆ 259 ರನ್‌ಗಳ ಮುನ್ನಡೆ ಗಳಿಸಿತ್ತು. ಇಂದು ಮೂರನೇ ದಿನದಾಟದಲ್ಲಿ ರವಿಚಂದ್ರನ್ ಅಶ್ವಿನ್ (77ಕ್ಕೆ 5) ದಾಳಿಗೆ ಸಿಲುಕಿದ ಇಂಗ್ಲೆಂಡ್, ಕೇವಲ 195 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

    ಅಶ್ವಿನ್ ಎರಡನೇ ಇನಿಂಗ್ಸ್‌ನಲ್ಲಿ ಐದು ವಿಕೆಟ್ ಸೇರಿದಂತೆ ಪಂದ್ಯದಲ್ಲಿ ಒಟ್ಟು ಒಂಬತ್ತು ವಿಕೆಟ್‌ಗಳನ್ನು ಪಡೆದರು. ಬೂಮ್ರಾ ಹಾಗೂ ಕುಲದೀಪ್ ಯಾದವ್ ತಲಾ ಎರಡು ಮತ್ತು ರವೀಂದ್ರ ಜಡೇಜ ಒಂದು ವಿಕೆಟ್ ಗಳಿಸಿದರು.

    259 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭದಲ್ಲೇ ಅಶ್ವಿನ್ ಆಘಾತ ನೀಡಿದರು. ಪರಿಣಾಮ 103 ರನ್​ ಕಲೆಹಾಕುವಷ್ಟರಲ್ಲಿ ಇಂಗ್ಲೆಂಡ್ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಇದರ ನಡುವೆಯೂ ಜೋ ರೂಟ್ (84) ಅರ್ಧಶತಕ ಬಾರಿಸಿದರು. ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಇಂಗ್ಲೆಂಡ್ 195 ರನ್​ಗಳಿಗೆ ಆಲೌಟ್ ಆಗುವ ಮೂಲಕ ಇನಿಂಗ್ಸ್ ಹಾಗೂ 64 ರನ್​ಗಳಿಂದ ಸೋಲು ಕಂಡಿತು.

    ಟೀಮ್ ಇಂಡಿಯಾ ಪರ ದ್ವಿತೀಯ ಇನಿಂಗ್ಸ್​ನಲ್ಲಿ ಅಶ್ವಿನ್ 5 ವಿಕೆಟ್ ಕಬಳಿಸಿದರೆ, ಜಸ್​ಪ್ರೀತ್ ಬುಮ್ರಾ ಮತ್ತು ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಪಡೆದಿದ್ದಾರೆ.

    ರಾಜಕೀಯಕ್ಕೆ ಅಖಾಡಕ್ಕೆ ಟಾಲಿವುಡ್ ನಟ! ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts