More

    6 ಸಾವಿರ ಕೋಟಿ ರೂ. ಯೋಜನೆ ಅನುಷ್ಠಾನ

    ಮೂಡಲಗಿ: ಕರ್ನಾಟಕ, ಗುಜರಾತ, ಹರಿಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಉತ್ತರ ಪ್ರದೇಶ ರಾಜ್ಯಗಳ ಸಹಯೋಗದೊಂದಿಗೆ ಕೇಂದ್ರ ಸರ್ಕಾರ 6 ಸಾವಿರ ಕೋಟಿ ರೂ. ವೆಚ್ಚದಲ್ಲಿ ಅಟಲ್ ಭೂ ಜಲ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಕೇಂದ್ರ ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ ತುಡು ತಿಳಿಸಿದ್ದಾರೆ.

    ಸಂಸತ್‌ನಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ರಾಜ್ಯದಲ್ಲಿ ಕ್ಷೀಣಿಸುತ್ತಿರುವ ನೀರಿನ ಸಮಸ್ಯೆ ಪರಿಹರಿಸಲು ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದ 14 ಜಿಲ್ಲೆಗಳ 41 ತಾಲೂಕುಗಳನ್ನು ಒಳಗೊಂಡ 1199 ಗ್ರಾಮ ಪಂಚಾಯಿತಿಗಳನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದಿದ್ದಾರೆ.

    ಜೆಜೆಎಂ, ನರೇಗಾ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜಲಾನಯನ ಅಭಿವೃದ್ಧಿ ಘಟಕ, ಸಣ್ಣ ನೀರಾವರಿ ಯೋಜನೆಗಳ ಮೂಲಕ ಕೇಂದ್ರ ಸರ್ಕಾರ ನೀರಿನ ಸಂರಕ್ಷಣೆ ಮತ್ತು ಮಳೆ ನೀರು ಕೋಯ್ಲು ರಚನೆಗಳ ನಿರ್ಮಾಣವನ್ನು ಬೆಂಬಲಿಸುತ್ತದೆ ಎಂದು ಸಚಿವರು ಉತ್ತರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts