ನವದೆಹಲಿ: ಶುಕ್ರವಾರ (ಫೆಬ್ರವರಿ 28) ಮುಂಜಾನೆ ನೇಪಾಳ ಹಾಗೂ ಭಾರತದಲ್ಲಿ 6.1 ತೀವ್ರತೆಯ (Earthquake) ಭೂಕಂಪ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.
ಬಿಹಾರ, ಸಿಲುಗುರಿ, ಹಿಮಾಲಯನ್‌ನ ಮಧ್ಯಭಾಗದ ಸಿಂಧುಪಾಲ್‌ಚೌಕ್ ಜಿಲ್ಲೆಯಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ.ರಾಷ್ಟ್ರೀಯ ಭೂಕಂಪ ನಿರ್ವಹಣಾ ಮತ್ತು ಸಂಶೋಧನಾ ಕೇಂದ್ರ ಭೂಕಂಪದ ಕೇಂದ್ರವು ಸಿಂಧುಪಾಲ್‌ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಸ್ಥಳೀಯ ಕಾಲಮಾನ ಬೆಳಗಿನ ಜಾವ 2:51ಕ್ಕೆ ಸಂಭವಿಸಿರುವುದಾಗಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
EQ of M: 4.5, On: 28/02/2025 05:14:52 IST, Lat: 30.08 N, Long: 69.51 E, Depth: 10 Km, Location: Pakistan.
For more information Download the BhooKamp App https://t.co/5gCOtjdtw0 @DrJitendraSingh @OfficeOfDrJS @Ravi_MoES @Dr_Mishra1966 @ndmaindia pic.twitter.com/L0zXkuFUZE— National Center for Seismology (@NCS_Earthquake) February 27, 2025
ನೇಪಾಳದ ಹಲವು ಪ್ರದೇಶಗಳಲ್ಲಿ ವಿಶೇಷವಾಗಿ ಪೂರ್ವ ಮತ್ತು ಮಧ್ಯ ಪ್ರದೇಶಗಳಲ್ಲಿ, ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ವರದಿ ಮಾಡಿದೆ. ಭಾರತ ಮತ್ತು ಟಿಬೆಟ್, ಚೀನಾದ ಗಡಿ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿದೆ.
ಕೆಲ ದಿನಗಳ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿ, ಪಶ್ಚಿಮ ಬಂಗಾಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು. ರಿಕ್ಟರ್ ಮಾಪನದಲ್ಲಿ ಶೇ. 04ರಷ್ಟು ದಾಖಲಾಗಿದ್ದು, ಭೂಕಂಪದ ವೇಳೆ ದೊಡ್ಡ ಶಬ್ದವೊಂದು ಕೇಳಿಸಿತು ಎಂದು ಸ್ಥಳೀಯರು ತಿಳಿಸಿದ್ದರು. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.