16 C
Bangalore
Saturday, December 7, 2019

ಸಹಕಾರಿಗೆ 6.11 ಕೋಟಿ ರೂ. ಲಾಭ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಚಿಕ್ಕೋಡಿ: ಡಾ.ಪ್ರಭಾಕರ ಕೋರೆ ಸೌಹಾರ್ದ ಸಹಕಾರಿಯು ಆರ್ಥಿಕ ವರ್ಷದಲ್ಲಿ 6.11 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ.

ತಾಲೂಕಿನ ಅಂಕಲಿಯ ಶಿವಾಲಯದ ಅನುಭವ ಮಂಟಪದಲ್ಲಿ ಭಾನುವಾರ ತಮ್ಮ ಹೆಸರಿನಲ್ಲಿರುವ ಡಾ.ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿಯ 31ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿದರು.

ಕೇವಲ ಠೇವು ಸಂಗ್ರಹಿಸಿ ಸಾಲ ನೀಡುವುದಕ್ಕೆ ಮಾತ್ರ ಸೀಮಿತವಾಗದೇ ಸಣ್ಣ, ಪುಟ್ಟ ಉದ್ಯೋಗಗಳನ್ನು ಕೈಗೊಳ್ಳುವ ಸಲುವಾಗಿ ಸಾಲದ ಜತೆಗೆ ವಿಮೆ ಸೌಲಭ್ಯ, ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲದೇ ರಾಷ್ಟ್ರೀಕೃತ ಬ್ಯಾಂಕ್‌ಗಳ ನೀಡುವ ಸೌಲಭ್ಯವನ್ನು ಒಂದೇ ಸೂರಿನಡಿಯಲ್ಲಿ ಸಹಕಾರಿ ನೀಡುತ್ತಿದೆ. ರೈತ ಸದಸ್ಯರು ಸಾಲದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಸಹಕಾರಿಯು ಪ್ರಸಕ್ತ ಸಾಲಿನಲ್ಲಿ 2.18 ಕೋಟಿ ರೂ. ಷೇರು ಬಂಡವಾಳ, 22.89 ಕೋಟಿ ರೂ. ನಿ 736 ಕೋಟಿ ರೂ.ಗಳಿಗೂ ಠೇವು ಸಂಗ್ರಹ 7747 ಕೋಟಿ ರೂ. ದುಡಿಯುವ ಬಂಡವಾಳದೊಂದಿಗೆ 6.11 ಕೋಟಿ ರೂ.ಗಳಿಗೂ ಮೀರಿ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15 ಲಾಭಾಂಶ ನೀಡಲು ನಿರ್ಧರಿಸಲಾಗಿದೆ ಎಂದರು. ಪ್ರತಿಭಾವಂತ ಬಡ ಐದು ಜನ ಹೆಣ್ಣುಮಕ್ಕಳ ಡಾ.ಪ್ರಭಾಕರ ಕೋರೆ ಸೌಹಾರ್ದ ಸಹಕಾರಿಯು ದತ್ತು ಪಡೆದು ಅವರಿಗೆ ಉಚಿತ ಶಿಕ್ಷಣ ನೀಡಲಾಗುವುದು. ಜತೆಗೆ ಪ್ರತಿಭಾವಂತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡೆಯಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಧನಸಹಾಯ ನೀಡಲಾಗುವುದು ಎಂದರು.

ಸಹಕಾರಿಯ ಆಮಂತ್ರಿತ ದಿಗ್ದರ್ಶಕ ಅಮಿತ ಕೋರೆ ಮಾತನಾಡಿ, ಆರ್ಥಿಕ ಕ್ಷೇತ್ರದಲ್ಲಿ ಹಲವು ರಾಷ್ಟ್ರೀಕೃತ ಹಾಗೂ ಸಹಕಾರಿ ಸಂಸ್ಥೆಗಳ ಪೈಪೋಟಿಯಲ್ಲಿಯೂ ಡಾ.ಪ್ರಭಾಕರ ಕೋರೆ ಸೌಹಾರ್ದ ಸಹಕಾರಿ 5 ವರ್ಷಗಳಲ್ಲಿ ಮೂರು ಪಟ್ಟು ಠೇವು ಸಂಗ್ರಹಿಸಿದ್ದು, 7,747 ಕೋಟಿ ರೂ.ಗಳ ದುಡಿಯುವ ಬಂಡವಾಳ ಹೊಂದಿರುವುದಕ್ಕೆ ಗ್ರಾಹಕರು, ರೈತ ಸದಸ್ಯರು ನಮ್ಮ ಸಹಕಾರಿಯ ಮೇಲೆ ಇಟ್ಟ ವಿಶ್ವಾಸವೇ ಕಾರಣ ಎಂದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರ ಜೀವವು ಮುಖ್ಯ ಅದಕ್ಕಾಗಿಯೇ ವೈಯಕ್ತಿಕ ಹಾಗೂ ಕುಟುಂಬದ ಎಲ್ಲ ಸದಸ್ಯರಿಗೂ ಜೀವ ವಿಮೆ ಹಾಗೂ ವಾಹನ ವಿಮೆ ಸೌಲಭ್ಯದ ವಿಶೇಷ ಯೋಜನೆಯನ್ನು ಸಹಕಾರಿಯಲ್ಲಿ ಆರ್ಥಿಕ ವರ್ಷದಿಂದ ಜಾರಿಗೆ ತರಲಾಗಿದ್ದು, ಅದರ ಸದುಪಯೋಗಪಡೆದುಕೊಳ್ಳಬೇಕು ಎಂದರು.

ಅಧ್ಯಕ್ಷ ಮಹಾಂತೇಶ ಪಾಟೀಲ ಹಾಗೂ ಪ್ರಧಾನ ವ್ಯವಸ್ಥಾಪಕ ದೇವೇಂದ್ರ ಕರೋಶಿ ವಾರ್ಷಿಕ ವರದಿ ಮಂಡಿಸಿದರು. ಸಹಕಾರಿಯ 39 ಶಾಖೆಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಅತೀ ಹೆಚ್ಚಿನ ವ್ಯವಹಾರ ಮಾಡಿದ ಹಾರೂಗೇರಿ ಶಾಖೆ ಹಾಗೂ ನಗರ ಪ್ರದೇಶದಲ್ಲಿನ ದಾವಣಗೇರೆ ಶಾಖೆಗೆ ಪ್ರಥಮ ಬಹುಮಾನ ನಗದು ಹಣ ಹಾಗೂ ಪ್ರಮಾಣ ಪತ್ರ ನೀಡಿ ಡಾ.ಪ್ರಭಾಕರ ಕೋರೆ ಹಾಗೂ ಅಮಿತ ಕೋರೆ ವಿತರಿಸಿದರು.

ಭರತೇಶ ಬನವನೆ, ಅಜಿತ ದೇಸಾಯಿ, ಕೆ.ಕೆ.ಮೈಶಾಳೆ, ಸಿಎ ವಿ.ಎ.ಕರ‌್ಹಾಡಕರ, ಸಹಕಾರಿಯ ಉಪಾಧ್ಯಕ್ಷೆ ಶೋಭಾ ಜಕಾತೆ, ಸಂಚಾಲಕರಾದ ಮಲ್ಲಿಕಾರ್ಜುನ ಕೋರೆ, ಸಿದಗೌಡ ಮಗದುಮ್ಮ, ನೆಹರು ಚಿಕಲಿ, ಪಿಂಟು ಹಿರೇಕುರುಬರ, ಮಹಾದೇವ ಪೋಳ, ಶೈಲಜಾ ಪಾಟೀಲ, ಬಸಗೌಡಾ ಆಸಂಗಿ, ಡಾ.ಸುಕುಮಾರ ಚೌಗಲೆ, ಲಿಂಬಾಜಿ ನಾಗರಾಳೆ, ಕಾಡಪ್ಪ ಸಂಗೋಟೆ, ಜ್ಯೋತಿಗೌಡಾ ಪಾಟೀಲ, ಸಚಿನ ಕುಟೋಳೆ, ಗಣಪತಿ ಕಮತೆ, ಜಯಶ್ರೀ ಮೇದಾರ, ಪಾರ್ವತಿ ಧರನಾಯಕ, ಪ್ರಧಾನ ಕಚೇರಿ ಅೀಕ್ಷಕರಾದ ಸುನಂದಾ ಮಗದುಮ್ಮ, ಡಿ.ಎಸ್.ಕರೋಶಿ ಸೇರಿ ಸಂಸ್ಥೆಯ ನಿರ್ದೇಶಕರು ಹಾಗೂ ಸಲಹಾ ಸಮಿತಿಗಳ ಅಧ್ಯಕ್ಷರು, ನಿರ್ದೇಶಕರು ಇದ್ದರು.

ಡಾ.ಪ್ರಭಾಕರ ಕೋರೆ ಸೌಹಾರ್ದ ಸಹಕಾರಿಯು 5 ಜನ ಹೆಣ್ಣುಮಕ್ಕಳನ್ನು ದತ್ತು ಪಡೆದು ಅವರಿಗೆ ಶೈಕ್ಷಣಿಕ ಸಹಾಯಧನ ನೀಡಲಾಗುವುದು. ಸಹಕಾರಿ ಸದಸ್ಯರು ಬಯಸಿದರೇ ಈ ಸಲದ ಲಾಭಾಂಶ ಹಣವನ್ನು ನೆರೆಯಲ್ಲಿ ಮನೆ ಕಳೆದುಕೊಂಡು ನಿರಾಶ್ರಿತರಿಗೆ ಸೂರು ಕಲ್ಪಿಸಲು ಹಣ ಬಳಕೆ ಮಾಡಲಾಗುವುದು.
|ಡಾ.ಪ್ರಭಾಕರ ಕೋರೆ ರಾಜ್ಯಸಭೆ ಸದಸ್ಯ, ಕೆಎಲ್‌ಇ ಕಾರ್ಯಾಧ್ಯಕ್ಷ

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...