More

    ನೈರುತ್ಯ ರೈಲ್ವೆಯಿಂದ 6.2 ಲಕ್ಷ ಟಿಕೆಟ್ ರಹಿತ ಪ್ರಯಾಣ ಪ್ರಕರಣ ದಾಖಲು; ಸಂಗ್ರಹವಾದ ಒಟ್ಟು ದಂಡವೆಷ್ಟು? ಇಲ್ಲಿದೆ ಪೂರ್ಣ ವಿವರ…

    ಬೆಂಗಳೂರು: ನೈರುತ್ಯ ರೈಲ್ವೆಯ ಟಿಕೆಟ್ ತಪಾಸಣಾ ಸಿಬ್ಬಂದಿ ಪ್ರಸಕ್ತ ಹಣಕಾಸು ವರ್ಷದಲ್ಲಿ (2023 ಏಪ್ರಿಲ್ 1 ರಿಂದ ಡಿಸೆಂಬರ್ 31) 6,27,014 ಲಕ್ಷ ಟಿಕೆಟ್ ರಹಿತ ಪ್ರಯಾಣದ ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಮೂಲಕ 46.31 ಕೋಟಿ ರೂ. ದಂಡ ಸಂಗ್ರಹವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.9.95 ಹೆಚ್ಚಳವಾಗಿದೆ. ಇದು ನೈರುತ್ಯ ರೈಲ್ವೆ ಪ್ರಾರಂಭವಾದಾಗಿನಿಂದ ಅತಿ ಹೆಚ್ಚು ದಂಡ ವಸೂಲಿ ಆಗಿದೆ.

    ಟಿಕೆಟ್ ರಹಿತ ಮತ್ತು ಅನಿಯಮಿತ ಪ್ರಯಾಣವನ್ನು ತಡೆಯಲು ಎಕ್ಸ್​​ಪ್ರೆಸ್, ವಿಶೇಷ ರೈಲುಗಳು ಸೇರಿದಂತೆ ಪ್ರಯಾಣಿಕರ ರೈಲು ಸೇವೆಗಳಲ್ಲಿ ಎಲ್ಲಾ ಅಧಿಕೃತ ರೈಲು ಬಳಕೆದಾರರಿಗೆ ಆರಾಮದಾಯಕ ಪ್ರಯಾಣ ಮತ್ತು ಉತ್ತಮ ಸೇವೆಗಳನ್ನು ನೀಡಲು ವಿಶೇಷ ಟಿಕೆಟ್ ತಪಾಸಣಾ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ಮಾಹಿತಿ ನೀಡಿದ್ದಾರೆ.

    ಕಳೆದ ಡಿಸೆಂಬರ್​ನಲ್ಲಿ ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ 72,041 ಪ್ರಕರಣಗಳನ್ನು ದಾಖಲಿಸಿ 5.13 ಕೋಟಿ ರೂ.ಗಳ ದಂಡವನ್ನು ಸಂಗ್ರಹಿಸಲಾಗಿದೆ.

    ಏಪ್ರಿಲ್ 1 ರಿಂದ ಡಿಸೆಂಬರ್ 31 ರವರೆಗೆ ವಿಭಾಗವಾರು ದಂಡ ಸಂಗ್ರಹ ವಿವರ

    • ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು 96,790 ಪ್ರಕರಣಗಳನ್ನು ದಾಖಲಿಸಿ 6.36 ಕೋಟಿ ರೂ. ದಂಡವನ್ನು ಸಂಗ್ರಹಿಸಿದೆ.
    • ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು 3,68,205 ಪ್ರಕರಣಗಳನ್ನು ದಾಖಲಿಸಿ 28.26 ಕೋಟಿ ರೂ. ದಂಡವನ್ನು ಸಂಗ್ರಹಿಸಿದೆ.
    • ನೈರುತ್ಯ ರೈಲ್ವೆಯ ಮೈಸೂರು ವಿಭಾಗ 1,00,538 ಪ್ರಕರಣಗಳನ್ನು ದಾಖಲಿಸಿ 5.91 ಕೋಟಿ ರೂ. ದಂಡ ಸಂಗ್ರಹಿಸಿದೆ.
    • ನೈರುತ್ಯ ರೈಲ್ವೆಯ ಫ್ಲೈಯಿಂಗ್ ಸ್ಕ್ವಾಡ್ (ಕೇಂದ್ರ ಕಚೇರಿ) ವಿಭಾಗವು 61,481 ಪ್ರಕರಣಗಳನ್ನು, ದಾಖಲಿಸಿ 5.77 ಕೋಟಿ ರೂ. ದಂಡವನ್ನು ಸಂಗ್ರಹಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts