

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ ಹಾಕಿ ಸಮಾಜದ ಸ್ವಾಸ್ಥೃಕೆಡಿಸಲು ಯತ್ನಿಸಿದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೌದಿ ಅರೇಬಿಯಾದಿಂದ ಇನ್‌ಸ್ಟ್ರಾಗ್ರಾಂನಲ್ಲಿ ಪ್ರಚೋದನಕಾರಿ ಸಂದೇಶ ಹರಿ ಬಿಟ್ಟಿದ್ದ ಉಡುಪಿ ಜಿಲ್ಲೆಯ ಹೆಜಮಾಡಿ ಗ್ರೀನ್ ಹೌಸ್ ಎನ್.ಎಸ್. ರೋಡ್ ನಿವಾಸಿ ಮೊಹಮ್ಮದ್ ಅಸ್ಲಾಂ (23) ಎಂಬಾತನನ್ನು ಬಂಧಿಸಲಾಗಿದೆ.
ಇಡ್ಯಾ ಗ್ರಾಮದ ಕಾಟಿಪಳ್ಳ ಆಶ್ರಯ ಕಾಲೊನಿ ನಿವಾಸಿ ಚೇತನ್ (20), ಚೇಳ್ಯಾರ್‌ನ ನಿತಿನ್ ಅಡಪ (23) ಎಂಬವರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಇವರು ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪ್ರಚೋದನಕಾರಿ ಸಂದೇಶ ಹಾಕಿದ್ದರು.
ಸೌದಿ ಆರೇಬಿಯಾದಿಂದ ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಸಂದೇಶ ಹಾಕಿದ್ದ ಫರಂಗಿಪೇಟೆ ಅರ್ಕುಳ, ಕೊಪ್ಪಲ್‌ಹೌಸ್‌ನ ರಿಯಾಝ್ ಇಬ್ರಾಹಿಂ (30) ಎಂಬಾತನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.
ಕೂಳೂರು ಕಿಲೇರಿಯಾಮಸೀದಿ ಬಳಿಯ ನಿವಾಸಿ ಜಮಾಲ್ ಝಾಕೀರ್ (21) ಎಂಬಾತ ಇನ್‌ಸ್ಟಗ್ರಾಂನಲ್ಲಿ ಪ್ರಚೋದನಕಾರಿ ಸಂದೇಶ ಹಾಕಿದ್ದು, ಈತನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.
ಫೇಸ್‌ಬುಕ್ ಖಾತೆ ಮೂಲಕ ಪ್ರಚೋದನಕಾರಿ ಸಂದೇಶ ಹಾಕಿದ್ದ ಹಳೆಯಂಗಡಿ ಕೊಳವೈಲ್‌ನ ಗುರುಪ್ರಸಾದ್ ಎಂಬಾತನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.