ಶಿಕಾರಿಪುರ: ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ) ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸ್ಪರ್ಧಿಸಿದ 10 ಜನರಲ್ಲಿ ಕಾಂಗ್ರೆಸ್ ಬೆಂಬಲಿತ 6 ಅಭ್ಯರ್ಥಿಗಳು ಜಯಗಳಿಸಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಪಿ.ನಾಗರಾಜ್ ಗೌಡ ಹೇಳಿದರು
ಗೃಹ ಕಚೇರಿಯಲ್ಲಿ ಗೆದ್ದವರನ್ನು ಸನ್ಮಾನಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ಎಲ್ಲರ ಪರಿಶ್ರಮದಿಂದ ಗೆಲುವು ಸಾಧ್ಯವಾಗಿದೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿದೆ ಎಂದರು.
ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಕಾಂತರಾಜ್, ಉಮೇಶ್, ಶಾಂತಮ್ಮ ಈಶ್ವರಪ್ಪ, ರೋಹಿತ್, ಸುವರ್ಣಾ, ದಿನೇಶ್ ಜಯಗಳಿಸಿದ್ದಾರೆ. ಕೃಷಿಕರು ಪಕ್ಷವನ್ನು ಬೆಂಬಲಿಸಿದ್ದಾರೆ. ಮುಂಬರುವ ಯಾವುದೇ ಚುನಾವಣೆಗಳಿರಲಿ ಅವುಗಳಿಗೆ ಪೂರಕವಾಗಿ ಪಕ್ಷವನ್ನು ಇನ್ನಷ್ಟು ಬಲಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳದ ಶಿವರಾಂ, ಮಾರವಳ್ಳಿ ಉಮೇಶ್, ಕೋಡಿಹಳ್ಳಿ ಉಮೇಶ್ ಇತರರಿದ್ದರು.
ಕಾಂಗ್ರೆಸ್ ಬೆಂಬಲಿತ 6 ಮಂದಿ ಆಯ್ಕೆ

You Might Also Like
ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti
ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…
ಬೊಜ್ಜು ಕರಗಿಸಿ ಫಿಟ್ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…
ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips
ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…