ಕಾರ್​ ಶೋರೂಂನಲ್ಲಿ ಭಾರೀ ಅಗ್ನಿ ಅವಘಡ; ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Fire Accident
Published on

ಶಿವಮೊಗ್ಗ: ಕಾರ್​ ಶೋರೂಮ್​ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗದ ಶೇಷಾದ್ರಿಪುರಂನ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಶೋರೂಮ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಆದರೆ ಅದನ್ನು ಅಗ್ನಿಶಾಮಕ ದಳದ ಅಧಿಕಾರಿಗಳು ಖಚಿತಪಡಿಸಿಲ್ಲ. ಘಟನೆಯಲ್ಲಿ ಯಾರಿಗೂ ಹಾನಿ ಸಂಭವಿಸಿಲ್ಲ. ಆದರೆ ಕಟ್ಟಡ ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತುಗಳು ನಾಶವಾಗಿವೆ ಎಂದು ತಿಳಿದುಬಂದಿದೆ.

ಸತತ ಮೂರು ಗಂಟೆಗಳಿಗೂ ಹೆಚ್ಚು ಕಾಲ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದು, ಇದಕ್ಕಾಗಿ ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳ ಬಳಕೆ ಮಾಡಿದರು. 30ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಭದ್ರಾವತಿ, ತರೀಕೆರೆ, ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಮಿಸಿದ ಅಗ್ನಿಶಾಮಕ ದಳದ ವಾಹನಗಳ ಮೂಲಕ ಬೆಂಕಿ ನಂದಿಸಲು ಸಹಕರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net