ಗುವಾಹಟಿ: ಭಾರೀ ಮಳೆಯ ಹೊಡೆತಕ್ಕೆ ಸಿಲುಕಿರುವ ಸಿಕ್ಕಿಂನಲ್ಲಿ ಭೀಕರ ಪ್ರವಾರ ಪರಿಸ್ಥಿತಿ ತಲೆದೋರಿದ್ದು, ಮಂಗನ್ ಜಿಲ್ಲೆಯಲ್ಲಿ ಸುಮಾರು 6 ಮಂದಿ ಮೃತಪಟ್ಟಿದ್ದು, 1,200ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್: ಮಗನ ಅರೆಸ್ಟ್ ಸುದ್ದಿ ಕೇಳಿ, ಮನನೊಂದ ತಂದೆ ಹೃದಯಾಘಾತದಿಂದ ಸಾವು!
ಹಲವು ರಾಜ್ಯಗಳ 1,200ಕ್ಕೂ ಹೆಚ್ಚು ಪ್ರವಾಸಿಗರು, ಬಾಂಗ್ಲಾದೇಶದ 10, ನೇಪಾಳದ 3 ಹಾಗೂ ಥೈಲ್ಯಾಂಡ್‍ನ ಇಬ್ಬರು ಸೇರಿ ಒಟ್ಟು 15 ವಿದೇಶಿ ಪ್ರವಾಸಿಗರು ಮಂಗನ್ ಪಟ್ಟಣದಿಂದ ಸುಮಾರು 50 ಕಿಮೀ ದೂರದಲ್ಲಿರುವ ಲಾಚುಂಗ್ ಗ್ರಾಮದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.
ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಿಕ್ಕಿಬಿದ್ದ ಪ್ರವಾಸಿಗರನ್ನು ವಿಮಾನದಲ್ಲಿ ಕರೆತರಲು ಮುಖ್ಯ ಕಾರ್ಯದರ್ಶಿ ವಿಬಿ ಪಾಠಕ್ ಕೇಂದ್ರದೊಂದಿಗೆ ಮಾತುಕತೆ ನಡೆಸಿದ್ದಾರೆ. ಹೀಗೆ ಮಳೆ ಸುರಿದರೆ ಪರ್ಯಾಯವಾಗಿ, ರಸ್ತೆಯ ಮೂಲಕ ಅವರನ್ನು ಕರೆತರುವ ಪ್ರಯತ್ನ ಮಾಡಲಾಗುತ್ತದೆ. ಪ್ರವಾಹದಿಂದ ರಸ್ತೆ ಮಾರ್ಗಗಳು ಹಾನಿಗೀಡಾಗಿದ್ದು, ಸಂಪರ್ಕವನ್ನು ಪುನಃಸ್ಥಾಪಿಸಲು ಒಂದು ವಾರ ತೆಗೆದುಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಮಂಗನ್ ಜಿಲ್ಲೆಯಲ್ಲಿನ ಭೂಕುಸಿತದಲ್ಲಿ ಪಕ್ಷೆಪ್ ಮತ್ತು ಅಂಭಿತಾಂಗ್ ಆರು ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಸಂಕಷ್ಟದಲ್ಲಿ ಸಿಲುಕಿರುವವರ ರಕ್ಷಣೆಗಾಗಿ ಪಕ್ಷೇಪ್‍ನಲ್ಲಿ ಪರಿಹಾರ ಶಿಬಿರ ಸ್ಥಾಪಿಸಲಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ಮಂಗನ್ ಜಿಲ್ಲಾಡಳಿತಕ್ಕೆ ಆದಷ್ಟು ಬೇಗ ಪರಿಹಾರ ಧನ ನೀಡುವಂತೆ ತಿಳಿಸಲಾಗಿದೆ ಎಂದು ವಿ.ಬಿ ಪಾಠಕ್ ತಿಳಿಸಿದ್ದಾರೆ.
ಪಕ್ಸೆಪ್ ಮತ್ತು ಅಂಭಿಥಾಂಗ್ ಗ್ರಾಮಗಳಲ್ಲಿ ತಲಾ ಮೂವರು ಸಾವನ್ನಪ್ಪಿದ್ದಾರೆ. ಗೆಥಾಂಗ್ ಮತ್ತು ನಂಪಥಾಂಗ್‌ನಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ. ಸ್ಥಳಾಂತರಗೊಂಡ ಜನರಿಗಾಗಿ ಪಾಶೆಪ್‌ನಲ್ಲಿ ಪರಿಹಾರ ಶಿಬಿರವನ್ನು ಸ್ಥಾಪಿಸಲಾಗಿದೆʼʼ ಎಂದು ಮಂಗನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಮ್ ಕುಮಾರ್ ಚೆಟ್ರಿ ತಿಳಿಸಿದ್ದಾರೆ.
ಬುಧವಾರ ರಾತ್ರಿಯಿಂದ ಮಂಗನ್ ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾದ ಪರಿಸ್ಥಿತಿಯನ್ನು ಪರಿಶೀಲಿಸಲು ಹೇಮ್ ಕುಮಾರ್ ಚೆಟ್ರಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು ಮತ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ಉತ್ತರ ಸಿಕ್ಕಿಂನಲ್ಲಿ ಮೊಬೈಲ್ ನೆಟ್‌ವರ್ಕ್ ಸಂಪರ್ಕ ಕಡಿತಕೊಂಡಿರುವುದು ಕೂಡ ರಕ್ಷಣಾ ಕಾರ್ಯಾಚರಣೆಗೆ ತೊಡಕು ಉಂಟು ಮಾಡಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಕ್ಕಿಂನ 15 ಗ್ಲೇಶಿಯಲ್ ಸರೋವರಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ. ಈ ವಿಚಾರವಾಗಿ ರಾಷ್ಟ್ರೀಯ ದೂರ ಸಂವೇದಿ ಕೇಂದ್ರ ಮತ್ತು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಒಟ್ಟಾಗಿ ಕೆಲಸ ಮಾಡುತ್ತಿವೆ. ಪ್ರವಾಹ ಪರಿಸ್ಥಿತಿ ಎದರಿಸಲು ಸಾಕಷ್ಟು ಆಹಾರ ಸಂಗ್ರಹಣೆ ಇದೆ ಎಂದು ಅವರು ಹೇಳಿದ್ದಾರೆ.
ಬಿಎಸ್ವೈ, ಪ್ರಜ್ವಲ್, ದರ್ಶನ್ ಪ್ರಕರಣಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ!