More

  ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಆರು ಮಂದಿ ಸಾವು, ಓರ್ವ ಚಿಂತಾಜನಕ

  ಜೈಪುರ: ರಾಸಾಯನಿಕ ಕಾರ್ಖಾನೆ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಮಂದಿ ಮೃತಪಟ್ಟು ಓರ್ವ ಚಿಂತಾಜನಿಕವಾಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಜಿಲ್ಲೆಯ ಬಸ್ಸಿ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಂಕಿಯನ್ನು ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  ಈ ಕುರಿತು ಪ್ರತಿಕ್ರಿಯಿಸಿರುವ ಜೈಪುರ ಜಿಲ್ಲಾಧಿಕಾರಿ ಪ್ರಕಾಶ್ ರಾಜ್‌ಪುರೋಹಿತ್‌, ಬಾಯ್ಲರ್​ ಸ್ಪೋಟದಿಂದಾಗಿ ದುರ್ಘಟನೆ ಸಂಭವಿಸಿದ್ದು, ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಬೆಂಕಿ ನಂದಿಸಲಾಗಿದೆ.  ಗಾಯಾಳುಗಳನ್ನು ಇಲ್ಲಿನ ಸವಾಯಿ ಮಾನ್‌ ಸಿಂಗ್‌ ಸರ್ಕಾರಿ (ಎಸ್‌ಎಂಎಸ್‌) ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

  ಇದನ್ನೂ ಓದಿ: ಕಾಂಗ್ರೆಸ್​ನ ನಾಲ್ಕನೇ ಪಟ್ಟಿ ಪ್ರಕಟ; ದಿಗ್ವಿಜಯ್​, ಕಾರ್ತಿ​ ಸೇರಿದಂತೆ ಪ್ರಮುಖರು ಕಣಕ್ಕೆ

  ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ಶೇ 95ರಷ್ಟು ಸುಟ್ಟಗಾಯಗಳಾಗಿದ್ದ ಒಬ್ಬರು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶೇ 65ರಷ್ಟು ಸುಟ್ಟಗಾಯವಾಗಿರುವ ಮತ್ತೊಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಾಶ್ ರಾಜ್‌ಪುರೋಹಿತ್‌ ತಿಳಿಸಿದ್ದಾರೆ.

  ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ್ದ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಬೇಕು. ತಲೆಮರೆಸಿಕೊಂಡಿರುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts