

ಕಾಸರಗೋಡು: ಉಪ್ಪಳ ಕುರ್ಚಿಪಳ್ಳ ನಿವಾಸಿ ಮಹಮ್ಮದ್ ಎಂಬುವರು ಮಲ್ಲಿಕಾರ್ಜುನ ದೇವಸ್ಥಾನ ವಠಾರದಲ್ಲಿ ನಿಲ್ಲಿಸಿದ್ದ ಕಾರಿನ ಹಿಂಬದಿ ಸೀಟಿನಲ್ಲಿರಿಸಿದ್ದ 6 ಲಕ್ಷ ರೂ. ಇದ್ದ ಬ್ಯಾಗ್ ಕಳವಾಗಿರುವ ಬಗ್ಗೆ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ದೇವಸ್ಥಾನ ಹಿಂಬದಿ ರಸ್ತೆಯಲ್ಲಿ ಕಾರು ನಿಲ್ಲಿಸಿ ಪರಿಚಯದವರ ಜತೆ ಮಾತನಾಡುತ್ತಿದ್ದ ಸಂದರ್ಭ ಕಾರಿನ ಹಿಂಬದಿ ಸೀಟಿನಲ್ಲಿದ್ದ ಹಣದ ಬ್ಯಾಗನ್ನು ಇಬ್ಬರು ಅಪಹರಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.