Nelamangal Accident:  ಕಾರಿನ ಮೇಲೆ ಬಿದ್ದ ಕಂಟೇನರ್‌..ನೆಲಮಂಗಲದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು

Nelamangal Accident (1)
Published on

Nelamangal Accident:  ಹೊಸ ಕಾರಿನ ಮೇಲೆ ಕಂಟೇನರ್​ ಉರುಳಿ ಬಿದ್ದು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದ ದುರಂತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿದ್ದಾರೆ. ಏಕಾಏಕಿ ಲಾರಿ ಕಾರಿನ ಮೇಲೆ ಬಿದ್ದಿದ್ದರಿಂದ ಕಾರು ಅಪ್ಪಚ್ಚಿಯಾಗಿದೆ.  ಕಾರಿನೊಳಗಿದ್ದ ಎರಡು ಮಕ್ಕಳು ಸೇರಿ ಆರು ಜನರು ಸಹ ಮೃತಪಟ್ಟಿದ್ದಾರೆ.

Road Accident

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಗ್ರಾಮ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 1 ಕಿಲೋ ಮೀಟರ್​​ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ SP ಸಿ.ಕೆ ಬಾಬಾ ಸೇರಿದಂತೆ ಇತರೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರ ನೆರವಿನಿಂದ ಹರಸಾಹಸಪಟ್ಟು ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇನ್ನು ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net