25.1 C
Bangalore
Friday, December 6, 2019

ಕಸ್ತೂರಿರಂಗನ್ ವರದಿ ಜಾರಿಗೆ 6 ತಿಂಗಳು ಅವಕಾಶ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ವಿಜಯವಾಣಿ ಸುದ್ದಿಜಾಲ ಮಂಗಳೂರು
ಕೊಚ್ಚಿ ಹಾಗೂ ಕೊಡಗಿನಲ್ಲಿ ಸಂಭವಿಸಿರುವ ಪ್ರಾಕೃತಿಕ ವಿಕೋಪಗಳು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಮೇಲೆಯೂ ಪರಿಣಾಮ ಬೀರಿದಂತಿದೆ.
ವಿಳಂಬಗೊಳ್ಳುತ್ತಿರುವ ಕಸ್ತೂರಿರಂಗನ್ ವರದಿ ಅನುಷ್ಠಾನ ಪ್ರಕ್ರಿಯೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ನ್ಯಾಯಾಧಿಕರಣ, ಇನ್ನು 6 ತಿಂಗಳೊಳಗೆ ಈ ವರದಿ ಜಾರಿ ಮಾಡುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಸೂಚನೆ ನೀಡಿದೆ. ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮಪ್ರದೇಶಗಳಲ್ಲಿ ಇನ್ನಷ್ಟು ಬದಲಾವಣೆ ಮಾಡುವುದು ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಲಿರುವುದರಿಂದ ಅಂತಹ ಯಾವುದೇ ಪ್ರಕ್ರಿಯೆ ಕೈಗೊಳ್ಳಬಾರದು ಎಂದು ನಿರ್ದೇಶನ ನೀಡಿದೆ.
2017ರ ಫೆ.27ರಂದು ಕಸ್ತೂರಿರಂಗನ್ ವರದಿ ಅನ್ವಯ ಪರಿಸರ ಸಚಿವಾಲಯ ಎರಡನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿ ರಾಜ್ಯಗಳಿಂದ ಅಂತಿಮ ಶಿಫಾರಸು ಕೇಳಿತ್ತು. ಅಧಿಸೂಚನೆ ಅನ್ವಯ 56,825 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಘೋಷಿಸಲಾಗಿದೆ. ಇದರಲ್ಲಿ ಯಾವುದೇ ರಿಯಾಯಿತಿ ತೋರಿಸದೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂಬ ನಿರ್ದೇಶನವನ್ನು ಹಸಿರು ಪೀಠ ನೀಡಿದೆ. ಗೋವಾ ಫೌಂಡೇಶನ್ ಹಾಕಿದ್ದ ಅರ್ಜಿಯ ವಿಚಾರಣೆ ನಡೆಸಿದ ಪೀಠ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯಲ್, ಪರಿಸರ ಸೂಕ್ಷ್ಮ ಪ್ರದೇಶಗಳನ್ನು ಇಳಿಕೆ ಮಾಡುವುದಾದರೆ ತಮ್ಮ ಗಮನಕ್ಕೆ ತರಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ವಿಳಂಬ ಬೇಡ:  ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿ ತಮ್ಮ ನಿಲುವುಗಳನ್ನು ಕರ್ನಾಟಕ, ಗೋವಾ, ಗುಜರಾತ್ ಇನ್ನೂ ಸಲ್ಲಿಸದ ಕಾರಣ ಪರಿಸರ ಸಚಿವಾಲಯಕ್ಕೆ ಈ ಬಗ್ಗೆ ಖಚಿತ ನಿಲುವು ಪಡೆಯುವುದಕ್ಕೆ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ವಿಳಂಬವಾಗಿದೆ. ರಾಜ್ಯಗಳ ಈ ವಿಳಂಬ ಧೋರಣೆ ಪಶ್ಚಿಮಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಸಂರಕ್ಷಣೆಗೆ ಪೂರಕವಾಗದು. ಆದಷ್ಟೂ ಬೇಗನೆ ಅಂತಿಮ ಅಧಿಸೂಚನೆ ಹೊರಡಿಸಬೇಕು, 6 ತಿಂಗಳು ಕಾಲಾವಕಾಶ ಎಂದು ಎನ್‌ಜಿಟಿ ಹೇಳಿದೆ.

ಕಾರ್ಯಸಾಧ್ಯವೇ ?:  ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ಎಷ್ಟರ ಮಟ್ಟಿಗೆ ಅಧಿಕಾರ ಇದೆ ಎನ್ನುವುದು ಚರ್ಚಿತ ವಿಚಾರ. ಅದಕ್ಕೆ ಸಾಂವಿಧಾನಿಕ ಬಲ ಇಲ್ಲ ಎನ್ನುವ ವಾದವಿದ್ದರೆ, ಇನ್ನೊಂದೆಡೆ ತನಗೆ ಸಾಕಷ್ಟು ಅಧಿಕಾರ ಇದೆ, ಅದನ್ನು ಕಡೆಗಣಿಸುವಂತಿಲ್ಲ ಎಂಬ ತೀರ್ಪನ್ನು ಸ್ವತಃ ಎನ್‌ಜಿಟಿಯೇ ಕೆಲ ವರ್ಷಗಳ ಹಿಂದೆ ನೀಡಿದೆ. ಸದ್ಯ ಎನ್‌ಜಿಟಿ ನೀಡಿರುವ ನಿರ್ದೇಶನವನ್ನು ಎಷ್ಟು ಗಂಭೀರವಾಗಿ ಪರಿಗಣಿಸುತ್ತದೆ ಎನ್ನುವುದು ಸಂದೇಹಾಸ್ಪದ ವಿಚಾರ ಎನ್ನುತ್ತಾರೆ ತಜ್ಞರು. ಇನ್ನೊಂದೆಡೆ ಕೇರಳ ಹಾಗೂ ಕೊಡಗಿನಲ್ಲಿ ನಡೆದಿರುವ ಭೂಕುಸಿತ, ಪ್ರವಾಹ, ಅತಿವೃಷ್ಟಿಯಂತಹ ಪ್ರಾಕೃತಿಕ ವಿಕೋಪದ ನಿದರ್ಶನ ಕೇಂದ್ರ ಸರ್ಕಾರದ ಕಣ್ಣ ಮುಂದಿದೆ. ಹಾಗಾಗಿ ಕಸ್ತೂರಿರಂಗನ್ ವರದಿ ಜಾರಿ ಸಾಧ್ಯತೆಯೂ ಇಲ್ಲದಿಲ್ಲ ಎನ್ನುತ್ತಾರೆ ಪರಿಸರ ತಜ್ಞರು.

ಕಸ್ತೂರಿರಂಗನ್ ವರದಿ ಅಷ್ಟೇನೂ ಜನರಿಗೆ ತೊಂದರೆ ತರುವಂತಿಲ್ಲ, ಅದರ ಬಗ್ಗೆ ವಿನಾಕಾರಣ ಹುಯಿಲೆಬ್ಬಿಸಲಾಗಿದೆ. ಪ್ರೊ.ಗಾಡ್ಗೀಳ್ ವರದಿಯಿಲ್ಲದಿದ್ದರೂ ಕಸ್ತೂರಿರಂಗನ್ ವರದಿಯಾದರೂ ಅನುಷ್ಠಾನ ಮಾಡುವುದಾದರೆ ಇದು ಸಕಾಲ. ಇನ್ನು ಸ್ವಲ್ಪ ವರ್ಷ ಕಳೆದರೆ ಕೇರಳ ಹಾಗೂ ಕೊಡಗಿನ ವಿಕೋಪದ ನೆನಪು ಮಾಸಬಹುದು, ಆಗ ವರದಿ ಅನುಷ್ಠಾನ ಕಷ್ಟ.
ನಿರೇನ್ ಜೈನ್, ಪರಿಸರ ತಜ್ಞ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...